ಜುಲೈ 14ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ : ಎಂ.ಪಿ.ಪ್ರಕಾಶ್
ಜುಲೈ 14ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ : ಎಂ.ಪಿ.ಪ್ರಕಾಶ್
ಜಾತ್ಯಾತೀತ ಜನತಾದಳ ಪಕ್ಷದ ಭಾವಿ ಸಚಿವರುಗಳ ಪಟ್ಟಿ ಸಿದ್ಧ
ರಾಜ್ಯ ಬಜೆಟ್ ಅಧಿವೇಶನವು ಜುಲೈ 19ರಿಂದ ಆರಂಭವಾಗಲಿದೆ. ಅದಕ್ಕಿಂತ ಮೊದಲು, ಅಂದರೆ ಜುಲೈ 14ರಂದು ಸಂಪುಟ ವಿಸ್ತರಣೆಗೊಳ್ಳಲಿದೆ. ಇದು ನನ್ನ ವೈಯುಕ್ತಿಕ ಅಭಿಪ್ರಾಯ ಎಂದು ಹೇಳಿದರು. ಅವರು ಸಮ್ಮಿಶ್ರ ಸರಕಾರದಲ್ಲಿ ಸಚಿವ ಸ್ಥಾನ ಅಲಂಕರಿಸಿದ ಬಳಿಕ ಮೊದಲ ಬಾರಿ ಬಳ್ಳಾರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪತ್ರಕರ್ತರ ಜೊತೆ ಮಾತನಾಡುತ್ತಿದ್ದರು.
ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಉಂಟಾಗಿಲ್ಲ. ನಮ್ಮ (ಜೆಡಿಎಸ್) ಪಕ್ಷದ ಸಚಿವರುಗಳ ಪಟ್ಟಿ ಈಗಾಗಲೇ ಸಿದ್ಧವಾಗಿದೆ. ಮುಖ್ಯಮಂತ್ರಿ ಧರ್ಮಸಿಂಗ್ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆ ಚರ್ಚಿಸಿ ಪಟ್ಟಿ ಸಿದ್ಧಪಡಿಸಲಿದ್ದಾರೆ ಎಂದು ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಧರ್ಮ-ಕಾರಣ












Click it and Unblock the Notifications