ಸಿಇಟಿ ಬಿಕ್ಕಟ್ಟು : ಸರ್ಕಾರದ ಮುಂದೆ ಕಾಮೆಡ್-ಕೆ ‘ಫಿಫ್ಟಿ ಫಿಫ್ಟಿ’ ಸೂತ್ರ
ಸಿಇಟಿ ಬಿಕ್ಕಟ್ಟು : ಸರ್ಕಾರದ ಮುಂದೆ ಕಾಮೆಡ್-ಕೆ ‘ಫಿಫ್ಟಿ ಫಿಫ್ಟಿ’ ಸೂತ್ರ
ಹಠ ಬಿಡದಿದ್ದಲ್ಲಿ ಕಾಲೇಜುಗಳ ನಿರ್ವಹಣೆಯನ್ನು ಸರ್ಕಾರವೇ ವಹಿಸಿಕೊಳ್ಳಲಿ -ಜಾಲಪ್ಪ ಸವಾಲು
ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ ದಂತ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ನೀಡುವಲ್ಲಿ ಶೇ.50 : 50 ಸೀಟು ಹಂಚಿಕೆ ಸೂತ್ರವನ್ನು ಸರ್ಕಾರ ಒಪ್ಪಿಕೊಳ್ಳಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಮೆಡ್-ಕೆ ಮುಖ್ಯಸ್ಥ ಆರ್.ಎಲ್.ಜಾಲಪ್ಪ ಒತ್ತಾಯಿಸಿದರು.
ಉನ್ನತ ಶಿಕ್ಷಣ ಕಾಲೇಜುಗಳ ನಿರ್ವಹಣೆ ದುಬಾರಿಯಾಗಿದೆ. ಆ ಕಾರಣದಿಂದಾಗಿ ಕನಿಷ್ಠ ಶೇ.50 ಸೀಟುಗಳನ್ನು ಕಾಲೇಜುಗಳ ಆಡಳಿತ ಮಂಡಳಿ ಹೊಂದುವುದು ಅನಿವಾರ್ಯ. ಸರ್ಕಾರ ಇದಕ್ಕೆ ಒಪ್ಪಬೇಕು. ಇಲ್ಲದಿದ್ದಲ್ಲಿ ಸರ್ಕಾರವೇ ಕಾಲೇಜುಗಳನ್ನು ನಿರ್ವಹಿಸಲಿ, ನಮ್ಮದೇನೂ ಅಭ್ಯಂತರವಿಲ್ಲ ಎಂದು ಜಾಲಪ್ಪ ಹೇಳಿದರು.
ತಾವು ನಡೆಸುತ್ತಿರುವ ದೇವರಾಜ ಅರಸು ವೈದ್ಯಕೀಯ ಕಾಲೇಜಿನ ಸ್ಥಿತಿಗತಿಯನ್ನು ಸುದ್ದಿಗೋಷ್ಠಿಯಲ್ಲಿ ಬಿಚ್ಚಿಟ್ಟ ಜಾಲಪ್ಪ - ಕಳೆದ ವರ್ಷ ತಮ್ಮ ಕಾಲೇಜು 3.5 ಕೋಟಿ ರುಪಾಯಿ ನಷ್ಟ ಅನುಭವಿಸಿದೆ. ಸರ್ಕಾರದ ನೀತಿಯನ್ನು ಒಪ್ಪಿಕೊಂಡಲ್ಲಿ ಈ ವರ್ಷ ನಷ್ಟದ ಪ್ರಮಾಣ 4.5ರಿಂದ 5 ಕೋಟಿ ರುಪಾಯಿಗೆ ಏರುವ ಆತಂಕವಿದೆ. ಈ ನಷ್ಟವನ್ನು ಕಾಲೇಜು ಭರಿಸಲು ಸಾಧ್ಯವಿಲ್ಲ ಎಂದರು.
ಕಾಂಗ್ರೆಸ್ ಪಕ್ಷದ ಸಂಸದರೂ ಆಗಿರುವ (ಚಿಕ್ಕಬಳ್ಳಾಪುರ ಕ್ಷೇತ್ರದಿಂದ) ಜಾಲಪ್ಪ , ಸೀಟು ಹಂಚಿಕೆ ಸಂಬಂಧ ಪಕ್ಷದ ಹೈಕಮಾಂಡ್‌ನಿಂದ ಯಾವುದೇ ಒತ್ತಡ ಬರುವುದಿಲ್ಲ ಎಂದು ಆಶಾಭಾವ ವ್ಯಕ್ತಪಡಿಸಿದರು. ಒಂದುವೇಳೆ ರಾಜಿಸೂತ್ರಕ್ಕೆ ಹೈಕಮಾಂಡ್ ಒತ್ತಡ ತಂದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಎಚ್ಚರಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications