ಎಬಿವಿಪಿ ಕರ್ನಾಟಕ ಬಂದ್‌: ಕಲ್ಲು ತೂರಾಟ, ಬಿಎಂಟಿಸಿ ಬಸ್ಸಿಗೆ ಬೆಂಕಿ

ಎಬಿವಿಪಿ ಕರ್ನಾಟಕ ಬಂದ್‌: ಕಲ್ಲು ತೂರಾಟ, ಬಿಎಂಟಿಸಿ ಬಸ್ಸಿಗೆ ಬೆಂಕಿ
ಹುಬ್ಬಳ್ಳಿಯಲ್ಲೂ ಅಹಿತಕರ ಘಟನೆಗಳು. ಬಂದ್‌ಗೆ ಸಂಘಸಂಸ್ಥೆಗಳ ಬೆಂಬಲ.

ಬೆಂಗಳೂರು : ಸಿಇಟಿ ಬಿಕ್ಕಟ್ಟನ್ನು ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ (ಕಾಮೆಡ್‌-ಕೆ) ವೈಫಲ್ಯವನ್ನು ಪ್ರತಿಭಟಿಸಿ ಎಬಿವಿಪಿ (ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌) ಕರೆ ನೀಡಿದ್ದ ಕರ್ನಾಟಕ ಬಂದ್‌ ಸಮಯದಲ್ಲಿ ಕೆಲವೆಡೆ ಹಿಂಸಾಚಾರ ಸಂಭವಿಸಿದೆ.

ಡಿಪೊದಿಂದ ಹೊರಬರುತ್ತಿದ್ದ ಬಿಎಂಟಿಸಿ ಬಸ್ಸೊಂದಕ್ಕೆ ಕೆಲವು ದುಷ್ಕರ್ಮಿಗಳು ಶನಿವಾರ ಬೆಳಗ್ಗೆ ಬೆಂಕಿ ಹಚ್ಚಿದ್ದಾರೆ. ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಕಲ್ಲು ತೂರಾಟದ ಘಟನೆಗಳೂ ನಡೆದಿವೆ. ಹುಬ್ಬಳ್ಳಿಯಲ್ಲೂ ಕಲ್ಲು ತೂರಾಟದ ಘಟನೆಗಳು ವರದಿಯಾಗಿವೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ರಾಜ್ಯದ ಅನೇಕ ಶಾಲಾ ಕಾಲೇಜುಗಳು ಮುನ್ನೆಚ್ಚರಿಕೆ ಕ್ರಮವಾಗಿ ಶನಿವಾರ ಸ್ವಯಂ ಪ್ರೇರಿತವಾಗಿ ರಜೆ ಪ್ರಕಟಿಸಿವೆ. ಈ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಬಂದ್‌ ಬಿಸಿ ನಾಗರಿಕರಿಗೆ ತಟ್ಟಿಲ್ಲ . ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ಸುಗಳು ಎಂದಿನಂತೆ ಸಂಚರಿಸುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂದ್‌ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಾದ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಹಾಗೂ ಗುಲ್ಬರ್ಗಾಗಳಲ್ಲಿ ಹೆಚ್ಚಿನ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ಸಿಇಟಿ ಬಿಕ್ಕಟ್ಟು ಬಗೆಹರಿಸುವಲ್ಲಿನ ಕಾಮೆಡ್‌-ಕೆ ಹಾಗೂ ಸರ್ಕಾರದ ವೈಫಲ್ಯವನ್ನು ಪ್ರತಿಭಟಿಸಿ ಆ.28ರ ಶನಿವಾರ ಒಂದು ದಿನದ ಬಂದ್‌ಗೆ ಎಬಿವಿಪಿ ಕರೆ ನೀಡಿತ್ತು . ಅಖಿಲ ಕರ್ನಾಟಕ ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘ, ಭಜರಂಗ ದಳ, ಹಿಂದೂ ಜಾಗರಣ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಇನ್ನಿತರ ಸಂಘಸಂಸ್ಥೆಗಳು ಬಂದ್‌ಗೆ ಬೆಂಬಲ ನೀಡಿವೆ ಎಂದು ಎಬಿವಿಪಿ ತಿಳಿಸಿದೆ.

(ಪಿಟಿಐ)

ಮುಖಪುಟ / ವಾರ್ತೆಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+