ರಾಜ್ಯದ 34 ನಗರಸಭೆ ಅಧ್ಯಕ್ಷ,ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ತಡೆ
ರಾಜ್ಯದ 34 ನಗರಸಭೆ ಅಧ್ಯಕ್ಷ,ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ತಡೆ
ಮೀಸಲಾತಿಯಲ್ಲಿ ಕಂಡ ದೋಷದಿಂದ ಚುನಾವಣೆ ಸ್ಥಗಿತ
ನಾಲ್ಕನೇ ಅವಧಿಗೆ ನಿಗದಿಪಡಿಸಿರುವ ಮೀಸಲಾತಿಯಲ್ಲಿ ದೋಷವಿದೆ ಎಂದು ಆರೋಪಿಸಿ ಕಾರವಾರ ನಗರ ಸಭೆ ಸದಸ್ಯ ಸದಾನಂದ ಮಹಾಬಲೇಶ್ವರ ನಾಯಕ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ ನ್ಯಾಯಮೂರ್ತಿಗಳು, 34 ನಗರಸಭೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ನಡೆಯಬೇಕಿದ್ದ ಚುನಾವಣೆಗೆ ತಡೆಯಾದೇಶ ನೀಡಿದ್ದಾರೆ.
ಕರ್ನಾಟಕ ಮುನಿಸಿಪಲ್ ಕಾಯ್ದೆ ಸೆಕ್ಷನ್52 ಕ್ಕೆ ಅನುಗುಣವಾಗಿ ಅನುಗುಣವಾಗಿ ಸರ್ಕಾರ ಮೀಸಲಾತಿ ನಿಗದಿಪಡಿಸಿಲ್ಲ. ಕಳೆದ ಬಾರಿ ನಿಗದಿಯಾಗಿದ್ದ ಮೀಸಲಾತಿಯೇ ಈ ಬಾರಿಯೂ ಪುನರಾವರ್ತನೆ ಆಗಿದೆ. ಆದ್ದರಿಂದ ಸರ್ಕಾರ ಪ್ರಕಟಿಸಿರುವ ಮೀಸಲಾತಿ ಅಧಿಸೂಚನೆ ಕಾನೂನು ಬಾಹಿರ ಎಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು.
ಸರದಿ ಮೀಸಲಾತಿಯ ಮೂಲ ಆಶಯಕ್ಕೆ ವಿರುದ್ದವಾಗಿ ಮೀಸಲಾತಿ ನಿಗದಿಪಡಿಸಿರುವುದರಿಂದ ಕೆಲವು ವರ್ಗಗಳಿಗೆ ಅನ್ಯಾಯವಾಗಲಿದೆ. ಆದ್ದರಿಂದ ಸರ್ಕಾರ ಮೀಸಲಾತಿ ನಿಗದಿಪಡಿಸಿ ಹೊರಡಿಸಿರುವ ಅಧಿ ಸೂಚನೆಗೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು












Click it and Unblock the Notifications