ಪೀಣ್ಯ ಕೈಗಾರಿಕಾ ನಗರ ಪ್ರಾಧಿಕಾರ ಸ್ಥಾಪನೆಗೆ ರಾಜ್ಯ ಸರ್ಕಾರ ಕಟಿಬದ್ಧ
ಪೀಣ್ಯ ಕೈಗಾರಿಕಾ ನಗರ ಪ್ರಾಧಿಕಾರ ಸ್ಥಾಪನೆಗೆ ರಾಜ್ಯ ಸರ್ಕಾರ ಕಟಿಬದ್ಧ
ಕೈಗಾರಿಕಾ ಪ್ರದೇಶದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವುದಾಗಿ ಸಿಂಧ್ಯಾ ಭರವಸೆ
ಸಂವಿಧಾನಕ್ಕೆ 74ನೇ ತಿದ್ದುಪಡಿಯ ಮೂಲಕ ಪೀಣ್ಯ ಕೈಗಾರಿಕಾ ನಗರ ಪ್ರಾಧಿಕಾರ ರಚಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಈ ಮೂಲಕ ಪೀಣ್ಯ ಕೈಗಾರಿಕಾ ಪ್ರದೇಶದ ಸಮಗ್ರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ ಎಂದು ಸಿಂಧ್ಯಾ ಹೇಳಿದರು. ಪೀಣ್ಯ ಕೈಗಾರಿಕೆಗಳ ಸಂಘದ ಬೆಳ್ಳಿಹಬ್ಬ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ (ಸೆ.27) ಸಿಂಧ್ಯಾ ಮಾತನಾಡುತ್ತಿದ್ದರು.
ಪೀಣ್ಯ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಈ ಪ್ರದೇಶದಲ್ಲಿ ಎಲ್ಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಸಚಿವ ಸಿಂಧ್ಯಾ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ರಸ್ತೆ , ಬೀದಿ ದೀಪ, ನೀರು ಸರಬರಾಜು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕಗೊಳಿಸುವಂತೆ ಕೈಗಾರಿಕೆಗಳ ಸಂಘ ಸಲ್ಲಿಸಿದ ಮನವಿಯನ್ನು ಸಿಂಧ್ಯಾ ಸ್ವೀಕರಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು












Click it and Unblock the Notifications