ದಸರಾ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಏಕಮುಖ ಸಂಚಾರ

ದಸರಾ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಏಕಮುಖ ಸಂಚಾರ
ಪ್ರಯಾಣಿಕರಿಗೆ ಕಿರಿಕಿರಿ ತಪ್ಪಿಸಲು ಮೈಸೂರು ಜಿಲ್ಲಾಡಳಿತದ ಕಸರತ್ತು

ಮೈಸೂರು : ದಸರಾ ಮಹೋತ್ಸವಕ್ಕೆ ಕೆಲವೇ ವಾರಗಳು ಉಳಿದಿವೆ. ಈ ನಡುವೆ ಬೆಂಗಳೂರು- ಮೈಸೂರು ಹೆದ್ದಾರಿ ಮಾರ್ಗವಾಗಿ ಸಂಚರಿಸುವ ವಾಹನಗಳಿಗೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ.

ಮೈಸೂರು -ಬೆಂಗಳೂರು ನಡುವಿನ 138 ಕಿ.ಮೀ ಉದ್ದದ ಹೆದ್ದಾರಿ ಕಾಮಗಾರಿ ಕಳೆದ ವರ್ಷ ಆರಂಭವಾಗಿದೆ. ಅದರ ಕಾಮಗಾರಿ ಪರಿಣಾಮ ಸಂಚಾರ ದಟ್ಟನೆಯಿಂದ ಟ್ರಾಫಿಕ್‌ ಜಾಮ್‌ ಸಾಮಾನ್ಯವಾಗಿದೆ. ಪ್ರಯಾಣಿಕರಿಗಂತೂ ದಿನವೂ ಉಸಿರು ಕಟ್ಟುವಂತಹ ಕಿರಿಕಿರಿ. ಪ್ರಯಾಣಿಕರ ಅನುಕೂಲಕ್ಕಾಗಿ ಪರ್ಯಾಯ ಮಾರ್ಗಗಳನ್ನು ಜಿಲ್ಲಾಡಳಿತ ರೂಪಿಸಿದೆ.

ದಸರಾ ಸಂದರ್ಭದಲ್ಲಿ ಮೈಸೂರು-ಬೆಂಗಳೂರು ನಡುವೆ ಉಂಟಾಗುವ ವಾಹನದಟ್ಟಣೆ ನಿಯಂತ್ರಣಕ್ಕೆ, ಹೆದ್ದಾರಿಯಲ್ಲಿ ಏಕಮುಖ ಸಂಚಾರವನ್ನು ವ್ಯವಸ್ಥೆಗೊಳಿಸಲಾಗಿದೆ. ಬಸ್‌ ಸಂಚಾರ ಹಾಗೂ ಸರಕು ಸೇವೆ ವಾಹನಗಳ ಸಂಚಾರವನ್ನು ಪ್ರತ್ಯೇಕಿಸಲಾಗಿದೆ.

ಮಳವಳ್ಳಿ-ಕನಕಪುರ ಹೆದ್ದಾರಿಯನ್ನು ಏಕಮುಖ ಸಂಚಾರಕ್ಕೆ ಬಳಸಿಕೊಳ್ಳಲಾಗಿದೆ. ತಡೆರಹಿತ ಬಸ್‌ಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ. ಆದರೆ ಬೆಂಗಳೂರಿನಿಂದ ಮೈಸೂರು ಮಾರ್ಗವಾಗಿ ತೆರಳುವ ವಾಹನಗಳ ಸಂಚಾರ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ. ಮೈಸೂರಿನಿಂದ ಬೆಂಗಳೂರಿಗೆ ವಾಪಸ್‌ ಮರಳುವ ವಾಹನಗಳು ಮಳವಳ್ಳಿ-ಕನಕಪುರ ಮಾರ್ಗ ವಾಗಿ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ಪ್ರವಾಸಿಗರು ದಸರಾದಲ್ಲಿ ಮುಕ್ತವಾಗಿ ಪಾಲ್ಗೊಳ್ಳಲು ಅನುಕೂಲವಾಗಲಿದೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+