ಗುಲ್ಬರ್ಗಾದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ವಿಜ್ಞಾನ ಮೇಳ
ಗುಲ್ಬರ್ಗಾದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ವಿಜ್ಞಾನ ಮೇಳ
ನ.21ರಿಂದ ನಾಲ್ಕು ದಿನಗಳ ಕಾಲ ವಿಜ್ಞಾನ ಉತ್ಸವ, ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ವಿದ್ಯಾರ್ಥಿಗಳು.
ರಾಜ್ಯದ 32 ಶೈಕ್ಷಣಿಕ ಜಿಲ್ಲೆಗಳಿಂದ 400 ವಿದ್ಯಾರ್ಥಿಗಳು ಹಾಗೂ 200 ಶಿಕ್ಷಕರು ವಿಜ್ಞಾನ ಮೇಳದಲ್ಲಿ ಭಾಗವಹಿಸುವರು. ಪ್ರತಿ ಜಿಲ್ಲೆಯಿಂದಲೂ ತಲಾ 6 ವೈಜ್ಞಾನಿಕ ಮಾದರಿಗಳನ್ನು ಆಯ್ದು ಮೇಳದಲ್ಲಿ ಪ್ರದರ್ಶಿಸಲಾಗುವುದು. ವಿವಿಧ ವಿಭಾಗಗಳಲ್ಲಿ ಒಟ್ಟು 40 ಮಾದರಿಗಳನ್ನು ಪರಿಣಿತರು ಆಯ್ಕೆ ಮಾಡಲಿದ್ದು , ಈ ಮಾದರಿಗಳಿಗೆ ಬಹುಮಾನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಅಂಜುಂ ಪರ್ವೇಜ್ ತಿಳಿಸಿದ್ದಾರೆ.
ವಿಜ್ಞಾನ ಮೇಳದಲ್ಲಿನ ಬಹುಮಾನಿತರು ದಕ್ಷಿಣಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ರಾಜ್ಯವನ್ನು ಪ್ರತಿನಿಧಿಸುವರು. ರಾಷ್ಟ್ರೀಯ ಮೇಳದಲ್ಲೂ ಅವರು ಭಾಗವಹಿಸುವ ಸಾಧ್ಯತೆಗಳಿವೆ. ವಿಜ್ಞಾನ ಮೇಳವನ್ನು ಉದ್ಘಾಟಿಸಲು ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಅವರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಅಂಜುಂ ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು












Click it and Unblock the Notifications