ಶ್ರವಣಬೆಳಗೊಳ ಬಾಹುಬಲಿ ಮಸ್ತಕಾಭಿಷೇಕಕ್ಕೆ 25ಕೋಟಿ ರುಪಾಯಿ
ಶ್ರವಣಬೆಳಗೊಳ ಬಾಹುಬಲಿ ಮಸ್ತಕಾಭಿಷೇಕಕ್ಕೆ 25ಕೋಟಿ ರುಪಾಯಿ
50 ಹಾಸಿಗೆಗಳ ಆಸ್ಪತ್ರೆ ಹಾಗೂ ಯಾತ್ರಿ ನಿವಾಸ ನಿರ್ಮಾಣ
ಮುಖ್ಯಮಂತ್ರಿ ಧರ್ಮಸಿಂಗ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ ಸಭೆ ಈ ನಿರ್ಧಾರ ಕೈಗೊಂಡಿದೆ .
12 ವರ್ಷಕ್ಕೂಮ್ಮೆ ನಡೆಯುವ ಈ ಧಾರ್ಮಿಕ ಕಾರ್ಯಕ್ರಮದ ಸಿದ್ಧತೆಯ ಹೊಣೆಗಾರಿಕೆಯನ್ನು ಹಾಸನ ಜಿಲ್ಲೆಯ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ವಹಿಸಲಾಗಿದೆ.
1993ರಲ್ಲಿ ಮಹಾಮಸ್ತಾಕಾಭಿಷೇಕಕ್ಕೆ ರಾಜ್ಯ ಸರ್ಕಾರ 10ಕೋಟಿ ರೂ.ಗಳನ್ನು ಖರ್ಚು ಮಾಡಿತ್ತು. ಆದರೆ ಈ ವರ್ಷ 25 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಮಹಾಮಸ್ತಕಾಭಿಷೇಕ ಉತ್ಸವ 11 ದಿನಗಳ ಕಾಲ ನಡೆಯಲಿದೆ. ಭಾರಿ ಸಂಖ್ಯೆಯಲ್ಲಿ ಭಕ್ತರು ಹಾಗೂ ಪ್ರವಾಸಿಗರು ಆಗಮಿಸುವುದರಿಂದ ಯಾತ್ರಿಗಳ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಧರ್ಮಸಿಂಗ್ ತಿಳಿಸಿದ್ದಾರೆ.
50 ಹಾಸಿಗೆಗಳ ಆಸ್ಪತ್ರೆ ಹಾಗೂ ಯಾತ್ರಿ ನಿವಾಸ ನಿರ್ಮಿಸಲಾಗುವುದು. ವಿದ್ಯುತ್ ಪೂರೈಕೆ ಮತ್ತು ರಸ್ತೆ ಗಳ ಸ್ಥಿತಿಗತಿ ಉತ್ತಮಗೊಳಿಸಲಾಗುವುದು. ತಾತ್ಕಾಲಿಕ ವಿಮಾನ ನಿಲ್ದಾಣ ಕಾಮಗಾರಿಯೂ ನಡೆಯಲಿದೆ ಎಂದು ಧರ್ಮಸಿಂಗ್ ಹೇಳಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು












Click it and Unblock the Notifications