ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧಾರವಾಡದಲ್ಲಿ ಅಂತರರಾಷ್ಟ್ರೀಯ ಜೈವಿಕ ಕೃಷಿ ತಂತ್ರಜ್ಞಾನ ಮೇಳ

By Staff
|
Google Oneindia Kannada News

ಧಾರವಾಡದಲ್ಲಿ ಅಂತರರಾಷ್ಟ್ರೀಯ ಜೈವಿಕ ಕೃಷಿ ತಂತ್ರಜ್ಞಾನ ಮೇಳ
ಹೊಸ ತಳಿಗಳ ಬಗೆಗಿನ ಗುಮಾನಿಗೆ ಸಮ್ಮೆಳನ ನೀಡಲಿದೆ ಉತ್ತರ

ಬೆಂಗಳೂರು : ಧಾರವಾಡದಲ್ಲಿ ಅಂತರರಾಷ್ಟ್ರೀಯ ಮಟ್ಟದ ಜೈವಿಕ ಕೃಷಿ ತಂತ್ರಜ್ಞಾನ ಸಮ್ಮೇಳನ ಡಿಸೆಂಬರ್‌ 15 ಮತ್ತು 16ರಂದು ನಡೆಯಲಿದೆ.

ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಥಾಪಿಸಿರುವ ಜೈವಿಕ ಕೃಷಿ ತಂತ್ರಜ್ಞಾನ ಸಂಸ್ಥೆಯ ಉದ್ಘಾಟನಾ ಸಮಾರಂಭದ ಅಂಗವಾಗಿ ಈ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಶಂಕರಲಿಂಗೇಗೌಡ ತಿಳಿಸಿದರು. ಮುಖ್ಯಮಂತ್ರಿ ಧರ್ಮಸಿಂಗ್‌ ಸಂಸ್ಥೆಯನ್ನು ಉದ್ಘಾಟಿಸುವರು. ಉಪಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಕೃಷಿ ಸಮ್ಮೇಳನದಲ್ಲಿ ಭಾಗವಹಿಸುವರು. ಅನೇಕ ಅಂತರರಾಷ್ಟ್ರೀಯ ತಜ್ಞರು, ಕೃಷಿ ತಂತ್ರಜ್ಞರು, ವಿಜ್ಞಾನಿಗಳು, ಸಂಶೋಧಕರು ಹಾಗೂ ರಾಜ್ಯದ ಎಲ್ಲ ಜಿಲ್ಲೆಗಳ ಆಯ್ದ ಪ್ರಗತಿಪರ ರೈತರು ಮತ್ತು ನಬಾರ್ಡ್‌ ಸೇರಿದಂತೆ ರಾಷ್ಟ್ರೀಕೃತ ಮತ್ತು ಖಾಸಗಿ ಹಣಕಾಸು ಸಂಸ್ಥೆಗಳು ಬ್ಯಾಂಕ್‌ಗಳು ಹಾಗೂ ಖಾಸಗಿ ಕಂಪನಿಗಳನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಗಿದೆ ಎಂದು ಶಂಕರಲಿಂಗೇಗೌಡ ಹೇಳಿದರು.

ವಾಣಿಜ್ಯ ಮತ್ತು ಆಹಾರ ಬೆಳೆಗಳ ಉತ್ಪಾದನೆಯನ್ನು ಹೆಚ್ಚಿಸುವುದು ಸಮ್ಮೇಳನದ ಇದರ ಮುಖ್ಯ ಉದ್ದೇಶ. ಜೈವಿಕ ಕೃಷಿ ತಂತ್ರಜ್ಞಾನ ವಲಯದಲ್ಲಿನ ಹೊಸ ತಳಿಯ ಬಗೆಗಿನ ಪ್ರಶ್ನೆಗಳು ಉತ್ತರಗಳು ಈ ಸಮ್ಮೇಳನದಲ್ಲಿ ನಡೆಯಲಿವೆ. ಜೈವಿಕ ಕೃಷಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಕ್ರಮ, ಆದ್ಯತೆ ನೀಡಬೇಕಾದ ವಿಷಯಗಳ ಕುರಿತು ಸಮಾಲೋಚನೆಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಂಕರಲಿಂಗೇಗೌಡ ತಿಳಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X