ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ.14ರಂದು ಧರ್ಮಸಿಂಗ್‌ನಿವಾಸದೆದುರು ಬಿಜೆಪಿ ಶಾಸಕರ ಧರಣಿ

By Staff
|
Google Oneindia Kannada News

ಡಿ.14ರಂದು ಧರ್ಮಸಿಂಗ್‌ನಿವಾಸದೆದುರು ಬಿಜೆಪಿ ಶಾಸಕರ ಧರಣಿ
ಪ್ಯಾಕೇಜ್‌ ಘೋಷಿಸುವುದು ಸರಕಾರಕ್ಕೆ ಪ್ಯಾಷನ್‌ ಆಗಿದೆ-ಯಡಿಯೂರಪ್ಪ

ಬೆಂಗಳೂರು : ರಾಜ್ಯಸರಕಾರದ ಧೋರಣೆಗಳನ್ನು ಖಂಡಿಸಿ, ಬಿಜೆಪಿ ಶಾಸಕರು ಮುಖ್ಯಮಂತ್ರಿ ಎನ್‌.ಧರ್ಮಸಿಂಗ್‌ ನಿವಾಸದ ಎದುರು ಡಿ.14 ರಂದು ಧರಣಿ ನಡೆಸಲು ಮುಂದಾಗಿದ್ದಾರೆ.

ವಿಧಾನಸಭೆಯ ಪ್ರತಿ ಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪನವರ ಮನೆಯಲ್ಲಿ ಮಂಗಳವಾರ ಸಭೆ ಸೇರಿದ್ದ ಬಿಜೆಪಿ ಶಾಸಕರು, ಧರಣಿ ನಡೆಸಲು ನಿರ್ಧರಿಸಿದ್ದಾರೆ. ಸರಕಾರದ ಕಾರ್ಯವೈಖರಿ ಬಗೆಗೆ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್‌.ಯಡಿಯೂರಪ್ಪ, ಸಮ್ಮಿಶ್ರ ಸರಕಾರ ಸುಳ್ಳು ಪ್ಯಾಕೇಜ್‌ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ. ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ. ಬಾಗಲಕೋಟೆಯಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಕಳೆದ ಎರಡೂವರೆ ವರ್ಷಗಳ ಹಿಂದೆ ಬಿಡುಗಡೆ ಮಾಡಬೇಕಾಗಿದ್ದ 638 ಕೋಟಿ ರೂ.ಗಳ ಪ್ಯಾಕೇಜ್‌ ಸರಕಾರದ ನಿರ್ಲಕ್ಷ್ಯದಿಂದ ನೆನೆಗುದಿಗೆ ಬಿದ್ದಿದೆ ಎಂದರು.

ಇದನ್ನು ಪ್ರಶ್ನಿಸಿದ ಪ್ರತಿಭಟನಕಾರರ ಮೇಲೆ ಪೋಲೀಸರು ದೌರ್ಜನ್ಯ ನಡೆಸಿದ್ದಾರೆ. ರಾಜ್ಯದೆಲ್ಲೆಡೆ ಜೆಡಿಎಸ್‌-ಕಾಂಗ್ರೆಸ್‌ ಶಾಸಕರು ದೌರ್ಜನ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ. ಸರಕಾರ ಹಿಂದು ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸರಕಾರದ ಜನವಿರೋಧಿ ನೀತಿ ವಿರೋಧಿಸಿ, ಬಿಜೆಪಿಯ 79 ಶಾಸಕರು, 10 ಮಂದಿ ವಿಧಾನಪರಿಷತ್‌ ಸದಸ್ಯರು ಸತ್ಯಾಗ್ರಹ ನಡೆಸಲು ಮುಂದಾಗಿದ್ದೇವೆ ಎಂದರು.

ನಮ್ಮ ನ್ಯಾಯಯುತ ಬೇಡಿಕೆಗಳನ್ನು ಒಳಗೊಂಡಿರುವ ಧರಣಿಗೆ ಮುಖ್ಯಮಂತ್ರಿ ಸ್ಪಂದಿಸದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಯಡಿಯೂರಪ್ಪ ಎಚ್ಚರಿಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X