ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಲು ಕೇಂದ್ರಕ್ಕೆ ರಾಜ್ಯದ ಮನವಿ
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಲು ಕೇಂದ್ರಕ್ಕೆ ರಾಜ್ಯದ ಮನವಿ
ಕೊಡವ ಭಾಷೆಯ ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಸೇರಿಸಲು ಒತ್ತಾಯ
ಡಿಸೆಂಬರ್ 30ರ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆ ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಿದೆ. ಅಂತೆಯೇ ಕೊಡವ ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಸೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಸಭೆ ನಿರ್ಧರಿಸಿತು. ಈ ವಿಷಯವನ್ನು ವಾರ್ತಾ ಸಚಿವ ಬಿ.ಶಿವರಾಂ ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.
ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ಹಾಗೂ ಸಂವಿಧಾನದ 8ನೇ ಪರಿಚ್ಛೇದದಲ್ಲಿ ಕೊಡವ ಭಾಷೆಯ ಸೇರ್ಪಡೆಗೆ ಪ್ರಧಾನಿಯವರನ್ನು ಒತ್ತಾಯಿಸಲು ಮುಖ್ಯಮಂತ್ರಿ ಧರ್ಮಸಿಂಗ್ ಮುಂದಿನ ತಿಂಗಳು ನವದೆಹಲಿಗೆ ನಿಯೋಗವೊಂದನ್ನು ಕರೆದೊಯ್ಯುವರು ಎಂದು ಶಿವರಾಂ ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು












Click it and Unblock the Notifications