ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆಬ್ರವರಿ ತಿಂಗಳಲ್ಲಿ 2,996 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ

By Staff
|
Google Oneindia Kannada News

ಫೆಬ್ರವರಿ ತಿಂಗಳಲ್ಲಿ 2,996 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ
5ನೇ ತರಗತಿ ವಿಲೀನಗೊಂಡ ಪ್ರಾಥಮಿಕ ಶಾಲೆಗಳ ಮೂಲಭೂತ ಸೌಕರ್ಯ ಮೇಲ್ದರ್ಜೆಗೆ

ಬೆಂಗಳೂರು : ಬರುವ ಫೆಬ್ರವರಿಯಲ್ಲಿ 2,996 ಪ್ರಾಥಮಿಕ ಶಾಲಾ ಶಿಕ್ಷಕರನ್ನು ಸರ್ಕಾರ ನೇಮಕ ಮಾಡಿಕೊಳ್ಳಲಿದೆ ಎಂದು ಶಿಕ್ಷಣ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಪ್ರಾಥಮಿಕ ಶಾಲೆಗಳಲ್ಲಿ ಐದನೇ ತರಗತಿಯ ವಿಲೀನದೊಂದಿಗೆ ಹೆಚ್ಚುವರಿ ಶಿಕ್ಷಕರ ಅಗತ್ಯ ಬಿದ್ದಿದೆ. ಈ ಅಗತ್ಯವನ್ನು ತುಂಬಲಿಕ್ಕಾಗಿ ಶಿಕ್ಷಕರ ನೇಮಕ ಪ್ರಕ್ರಿಯೆ ಚಾಲನೆಯಲ್ಲಿದ್ದು , 2,996 ಶಿಕ್ಷಕರನ್ನು ನೇಮಿಸಿಕೊಳ್ಳಲಾಗುವುದು ಎಂದು ರಾಜ್ಯವಿಧಾನ ಪರಿಷತ್ತಿಗೆ ರಾಮಲಿಂಗಾರೆಡ್ಡಿ ಜನವರಿ 25ರಂದು ತಿಳಿಸಿದರು.

ಐದನೇ ತರಗತಿ ವಿಲೀನಗೊಂಡ ಪ್ರಾಥಮಿಕ ಶಾಲೆಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಸರ್ಕಾರ ಉತ್ತಮಪಡಿಸಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಕಾಂಗ್ರೆಸ್‌ನ ಉಮಾಶ್ರೀ ಅವರ ಪ್ರಶ್ನೆಗೆ ಸಚಿವರು ಉತ್ತರಿಸುತ್ತಿದ್ದರು.

(ಪಿಟಿಐ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X