ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾಜಪ ಮುಖಂಡ ಬಿ.ಎಸ್‌.ಯಡಿಯೂರಪ್ಪ ನ್ಯಾಯಾಲಯಕ್ಕೆ ಶರಣು

By Staff
|
Google Oneindia Kannada News

ಭಾಜಪ ಮುಖಂಡ ಬಿ.ಎಸ್‌.ಯಡಿಯೂರಪ್ಪ ನ್ಯಾಯಾಲಯಕ್ಕೆ ಶರಣು
ಸುಪ್ರಿಂಕೋರ್ಟ್‌ ತೀರ್ಪು ಕಾದು ನೋಡಲು ನಿರ್ಧಾರ, ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ

ಬೆಂಗಳೂರು: ಹನ್ನೊಂದು ವರ್ಷಗಳಷ್ಟು ಹಳೆಯದಾದ ಕ್ರಿಮಿನಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರತಿಪಕ್ಷದ ನಾಯಕ ಮತ್ತು ಬಿಜೆಪಿ ಮುಖಂಡ ಬಿ.ಎಸ್‌.ಯಡಿಯೂರಪ್ಪ ಸೋಮವಾರ ನ್ಯಾಯಾಲದ ಮುಂದೆ ಹಾಜರಾದರು.

ಜಾಮೀನು ರಹಿತ ವಾರೆಂಟ್‌ ಹೊರಡಿಸಿದ್ದ ನ್ಯಾಯಾಲಯ, ಫೆ.15ರೊಳಗೆ ಯಡಿಯೂರಪ್ಪ , ರಾಮಚಂದ್ರೆಗೌಡ ಮತ್ತು ಸುರೇಶ್‌ಕುಮಾರ್‌ ಅವರನ್ನು ಬಂಧಿಸುವಂತೆ ಪೋಲೀಸರಿಗೆ ಸೂಚನೆ ನೀಡಿತ್ತು. ನಗರದ ಎಂಟನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್‌ ನ್ಯಾಯಮೂರ್ತಿ ಗುರುಸ್ವಾಮಿ ಮುಂದೆ ಹಾಜರಾದ ಯಡಿಯೂರಪ್ಪ , ಜಾಮೀನು ನೀಡುವಂತೆ ಕೋರಿದರು. ಜಾಮೀನು ನೀಡಿರುವ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಫೆ.15ಕ್ಕೆ ಮುಂದೂಡಿತು.

1994ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದ ಕೋಮುಗಲಭೆಯಲ್ಲಿ, ಹಿಂದುಗಳ ಮೇಲೆ ಪೋಲೀಸರು ದೌರ್ಜನ್ಯವೆಸಗಿದ್ದಾರೆಂದು ಮುಖ್ಯಮಂತ್ರಿಗಳ ಮನೆ ಮುಂದೆ ಯಡಿಯೂರಪ್ಪ ಮತ್ತಿತರರು ಪ್ರತಿಭಟನೆ ನಡೆಸಿದ್ದರು. ಆ ಸಂದರ್ಭದಲ್ಲಿನ ಗದ್ದಲದಲ್ಲಿ ಪೋಲೀಸರು ಗಾಯಗೊಂಡಿದ್ದರು. ಈ ಘಟನೆಯ ಹಿನ್ನೆಲೆಯಲ್ಲಿ 169ಮಂದಿ ಮೇಲೆ ಪೋಲೀಸರು ಪ್ರಕರಣ ದಾಖಲಿಸಿದ್ದರು.

ಸರಕಾರ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವಂತೆ ಯಡಿಯೂರಪ್ಪ ಒತ್ತಾಯಿಸಿದ್ದಾರೆ.
(ಪಿಟಿಐ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X