ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

63ಲಕ್ಷ ವಿದ್ಯಾರ್ಥಿಗಳಿಗೆ ಸಮವಸ್ತ್ರ-ರಾಮಲಿಂಗಾರೆಡ್ಡಿ

By Staff
|
Google Oneindia Kannada News

63ಲಕ್ಷ ವಿದ್ಯಾರ್ಥಿಗಳಿಗೆ ಸಮವಸ್ತ್ರ-ರಾಮಲಿಂಗಾರೆಡ್ಡಿ
ತ್ರೆೃಮಾಸಿಕ ಪದ್ಧತಿ ಮುಂದುವರಿಕೆ, 1900 ಬಿಎಡ್‌ ವಿಜ್ಞಾನ ಪದವೀಧರರಿಗೆ ಮೋಕ್ಷ

ಬೆಂಗಳೂರು : ಒಂದರಿಂದ ಒಂಬತ್ತನೆ ತರಗತಿವರೆಗೆ ರಾಜ್ಯದಲ್ಲಿ ಜಾರಿಯಲ್ಲಿರುವ ತ್ರೆೃಮಾಸಿಕ ಪರೀಕ್ಷಾ ವ್ಯವಸ್ಥೆಯನ್ನು ಹಿಂಪಡೆಯುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಗುಣಮಟ್ಟದ ಹೆಚ್ಚಳಕ್ಕೆ ಸರಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಮುಂದಿನ ಆರು ತಿಂಗಳಲ್ಲಿ 3000 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಮುಂದಾಗಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಜೂನ್‌ ತಿಂಗಳಲ್ಲಿಯೇ ಪಠ್ಯಪುಸ್ತಕಗಳು ವಿದ್ಯಾರ್ಥಿಗಳ ಕೈಸೇರಲಿವೆ ಎಂದರು.

ಶಾಲೆ ತೊರೆಯುವ ವಿದ್ಯಾರ್ಥಿಗಳ ಪ್ರಮಾಣ ಶೇ.9ರಿಂದ ಶೇ.7ಕ್ಕೆ ಇಳಿದಿದೆ. ಅದನ್ನು ಶೇ.5ಕ್ಕೆ ಇಳಿಸಲು ಸರಕಾರ ಕಾರ್ಯಪ್ರವೃತ್ತವಾಗಿದೆ. 63.09ಲಕ್ಷ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸಲು ಸಿದ್ಧತೆಗಳು ನಡೆದಿವೆ ಎಂದು ಸಚಿವರು ಹೇಳಿದರು.

42ಸಾವಿರ ಸರಕಾರಿ ಶಾಲೆಗಳು ಸೇರಿದಂತೆ, ರಾಜ್ಯದಲ್ಲಿ 62ಸಾವಿರ ಶಾಲೆಗಳಿವೆ. ವಿಜ್ಞಾನ ಶಿಕ್ಷಕರ ಸಮಸ್ಯೆಯತ್ತ ಸರಕಾರಕ್ಕೆ ಅರಿವಾಗಿದ್ದು, ಮೇ.31ರೊಳಗೆ 1900 ಪ್ರೌಢಶಾಲೆಗಳಿಗೆ ವಿಜ್ಞಾನ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಾಗಿ ರಾಮಲಿಂಗಾರೆಡ್ಡಿ ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X