ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್‌.ಆರ್‌.ಬೊಮ್ಮಾಯಿ ಆರೋಗ್ಯದಲ್ಲಿ ಚೇತರಿಕೆ

By Staff
|
Google Oneindia Kannada News

ಎಸ್‌.ಆರ್‌.ಬೊಮ್ಮಾಯಿ ಆರೋಗ್ಯದಲ್ಲಿ ಚೇತರಿಕೆ
ಎರಡು ದಿನಗಳಲ್ಲಿ ಆಸ್ಪತ್ರೆಯಿಂದ ಮನೆಗೆ

ಬೆಂಗಳೂರು : ತೀವ್ರ ಅಸ್ವಸ್ಥತೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್‌.ಆರ್‌.ಬೊಮ್ಮಾಯಿ ಅವರ ಆರೋಗ್ಯದಲ್ಲಿ ಬುಧವಾರ ಚೇತರಿಕೆ ಕಂಡುಬಂದಿದೆ.

ಮಧುಮೇಹ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದ ಬೊಮ್ಮಾಯಿ ಅವರನ್ನು ಸೋಮವಾರ ರಾತ್ರಿ ನಗರದ ಖಾಸಗಿ ನರ್ಸಿಂಗ್‌ ಹೋಂಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ನಮ್ಮ ತಂದೆಯವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಇನ್ನೊಂದು ಅಥವಾ ಎರಡು ದಿನಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಮನೆಗೆ ಕರೆದೊಯ್ಯುವುದಾಗಿ ಅವರ ಪುತ್ರ ಸಂಯುಕ್ತ ಜನತಾದಳದ ಮುಖಂಡ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X