ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಇಸ್ಕಾನ್‌ ಬಿಸಿಯೂಟ

By Staff
|
Google Oneindia Kannada News

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಇಸ್ಕಾನ್‌ ಬಿಸಿಯೂಟ
ಮಂಗಳೂರು ಜಿಲ್ಲೆಯ ಹತ್ತುಸಾವಿರ ವಿದ್ಯಾರ್ಥಿಗಳಿಗೆ ಜೂನ್‌ನಿಂದ ಬಿಸಿಯೂಟ

ಮಂಗಳೂರು : ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುವ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಒದಗಿಸುವ ಯೋಜನೆಗೆ ಜೂನ್‌ನಿಂದ ಚಾಲನೆ ನೀಡಲು ಇಸ್ಕಾನ್‌ ನಿರ್ಧರಿಸಿದೆ ಎಂದು ಇಸ್ಕಾನ್‌ನ ಅಧ್ಯಕ್ಷ ನಾಮನಿಷ್ಠ ದಾಸ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಮಂಗಳೂರಿನ ಹತ್ತು ಶಾಲೆಗಳ 2,500 ವಿದ್ಯಾರ್ಥಿಗಳಿಗೆ ಇಸ್ಕಾನ್‌ ಬಿಸಿಯೂಟದ ವ್ಯವಸ್ಥೆಯನ್ನು ಕಲ್ಪಿಸಿದೆ ಎಂದರು.

ಮುಂದಿನ ಯೋಜನೆಯಲ್ಲಿ ಮಂಗಳೂರು ಗ್ರಾಮಾಂತರ ಪ್ರದೇಶದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಈ ಯೋಜನೆಯನ್ನು ವಿಸ್ತರಿಸಲಾಗುತ್ತಿದೆ ಎಂದು ನಾಮನಿಷ್ಠ ದಾಸ ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X