ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಹೆಚ್ಚಳ ಸಂಭವ

By Staff
|
Google Oneindia Kannada News

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಹೆಚ್ಚಳ ಸಂಭವ
ಏಪ್ರಿಲ್‌ 1ರಿಂದ ಲೀಟರ್‌ಗೆ 4-5ರೂ.ಹೆಚ್ಚಿಸಲು ತೈಲ ಕಂಪನಿಗಳಿಂದ ಸರ್ಕಾರಕ್ಕೆ ಮನವಿ

ನವದೆಹಲಿ : ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಗಳು ಏಪ್ರಿಲ್‌ 1ರಿಂದ ಏರಿಕೆಯಾಗುವ ಸಂಭವವಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಹೆಚ್ಚುತ್ತಿರುವುದರಿಂದ ಕೇಂದ್ರ ಸರ್ಕಾರ ಬೆಲೆ ಹೆಚ್ಚಳಕ್ಕೆ ಮುಂದಾಗಬೇಕೆಂದು ತೈಲ ಕಂಪನಿಗಳು ಮನವಿ ಮಾಡಿವೆ.

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಗಳನ್ನು ಕ್ರಮವಾಗಿ ಲೀಟರ್‌ಗೆ 5 ರೂ ಮತ್ತು 4.30 ರೂ ಗಳಷ್ಟು ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ತೈಲ ಕಂಪನಿಗಳು ತಿಳಿಸಿವೆ.

ಜಾಗತಿಕ ಮಾರುಕಟ್ಟೆಯಲ್ಲಿ ಈಗ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 51.64ಡಾಲರ್‌ಗಳಷ್ಟಿದೆ. ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌, ಭಾರತ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಮತ್ತು ಹಿಂದೂಸ್ತಾನ್‌ ಪೆಟ್ರೋಲಿಯಂ ಕಾರ್ಪೊರೇಷನ್‌ಗಳು ಸದ್ಯದ ಪರಿಸ್ಥಿತಿಯಲ್ಲಿ ಈಗಿನ ದರಕ್ಕೆ ಇಂಧನ ಪೂರೈಕೆ ಮಾಡುವುದು ದುಸ್ತರವಾಗಿದೆ ಎಂದು ಅಭಿಪ್ರಾಯಪಟ್ಟಿವೆ.

(ಏಜನ್ಸೀಸ್‌)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X