ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ 100 ನ್ಯಾಯಾಲಯಗಳ ಸ್ಥಾಪನೆ

By Staff
|
Google Oneindia Kannada News

ಕರ್ನಾಟಕದಲ್ಲಿ 100 ನ್ಯಾಯಾಲಯಗಳ ಸ್ಥಾಪನೆ
ರಾಜ್ಯದಲ್ಲಿ ಬಾಕಿ ಉಳಿದಿರುವ 14.50ಲಕ್ಷ ಪ್ರಕರಣಗಳ ಶೀಘ್ರ ವಿಲೇವಾರಿಗೆ ಕ್ರಮ -ಎಚ್‌.ಕೆ.ಪಾಟೀಲ್‌

ಬೆಳಗಾವಿ : ರಾಜ್ಯದಲ್ಲಿ ಶೀಘ್ರದಲ್ಲಿಯೇ ನೂರು ಹೊಸ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ರಾಜ್ಯಕಾನೂನು ಹಾಗೂ ಸಂಸದೀಯ ವ್ಯವಹಾರ ಖಾತೆ ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಕಿ ಉಳಿದಿರುವ 14.50ಲಕ್ಷ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಹಾಗೂ ನ್ಯಾಯದಾನ ತ್ವರಿತಗೊಳಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ನ್ಯಾಯಾಲಯಗಳ ಸ್ಥಾಪನೆಗಾಗಿ ಸುಮಾರು 25 ಕೋಟಿ ರೂಪಾಯಿ ಖರ್ಚಾಗಬಹುದು. ಸರ್ಕಾರವು ಈ ಕುರಿತು ಈಗಾಗಲೇ ಹೈಕೋರ್ಟ್‌ ಜೊತೆ ಪತ್ರ ವ್ಯವಹಾರ ನಡೆಸಿದೆ. ಈ ಕಾರ್ಯಯೋಜನೆ ಮುಂದಿನ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಎಚ್‌.ಕೆ.ಪಾಟೀಲ್‌ ತಿಳಿಸಿದರು.

(ಏಜನ್ಸೀಸ್‌)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X