ಬೇಸಿಗೆ ರಜೆಯಲ್ಲೂ ಶಾಲಾ ಮಕ್ಕಳಿಗೆ ಬಿಸಿಯೂಟ
ಬೇಸಿಗೆ ರಜೆಯಲ್ಲೂ ಶಾಲಾ ಮಕ್ಕಳಿಗೆ ಬಿಸಿಯೂಟ
ಸುಪ್ರಿಂಕೋರ್ಟ್ ಆದೇಶದನ್ವಯ 34ಲಕ್ಷ ವಿದ್ಯಾರ್ಥಿಗಳಿಗೆ ಬಿಸಿಯೂಟ
ಬಿಸಿಯೂಟದ ಅಕ್ಷರ ದಾಸೋಹ ಯೋಜನೆಯನ್ನು ಕೋಲಾರ, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಧಾರವಾಡ, ರಾಯಚೂರು ಸೇರಿದಂತೆ ರಾಜ್ಯದ 21ಜಿಲ್ಲೆಗಳ 80ತಾಲೂಕುಗಳಲ್ಲಿ ಬೇಸಿಗೆ ರಜೆಯಲ್ಲಿಯೂ ಮುಂದುವರೆಸಲು ಸರ್ಕಾರ ನಿರ್ಧರಿಸಿದೆ.
ಸುಪ್ರಿಂಕೋರ್ಟ್ ಆದೇಶದನ್ವಯ ರಾಜ್ಯದ 34ಲಕ್ಷ ವಿದ್ಯಾರ್ಥಿಗಳು ರಜೆ ಸಮಯದಲ್ಲೂ ಬಿಸಿಯೂಟವನ್ನು ಪಡೆಯುವರು. ಏಪ್ರಿಲ್ 1ರಿಂದ ಬಿಸಿಯೂಟ ವ್ಯವಸ್ಥೆಯನ್ನು ಕಲ್ಪಿಸಲು ಸಿದ್ಧತೆಗಳು ನಡೆದಿವೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು












Click it and Unblock the Notifications