ರಾಜ್ಯದಲ್ಲಿ ಶೀಘ್ರ ಚುನಾವಣೆ : ಬಂಗಾರಪ್ಪ ಭವಿಷ್ಯ
ರಾಜ್ಯದಲ್ಲಿ ಶೀಘ್ರ ಚುನಾವಣೆ : ಬಂಗಾರಪ್ಪ ಭವಿಷ್ಯ
ಕಾಂಗ್ರೆಸ್, ಬಿಜೆಬಿ, ಜೆಡಿಎಸ್ ಜೊತೆ ಕೈಜೋಡಿಸಲು ಬಂಗಾರಪ್ಪ ನಕಾರ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಧರ್ಮಸಿಂಗ್ ಮತ್ತು ಮಾಜಿ ಪ್ರಧಾನಿ ದೇವೇಗೌಡರು ಪದೇ ಪದೇ ಚುನಾವಣೆಯ ಬಗ್ಗೆ ಮಾತನಾಡುತ್ತಾರೆ. ರಾಜ್ಯದಲ್ಲಿ ಚುನಾವಣೆಗಳು ನಡೆಯುವ ಸಾಧ್ಯತೆಗಳು ದಟ್ಟವಾಗಿವೆ ಎಂದರು.
ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾಗಿರುವ ಜಾತ್ಯತೀತ ಜನತಾದಳ ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಆ ಪಕ್ಷ ಒಂದು ವೇಳೆ ಮೈತ್ರಿಯನ್ನೂ ಮುರಿದುಕೊಂಡರೂ ಸಹಾ ಸಮಾಜವಾದಿ ಪಕ್ಷ ಜೆಡಿಎಸ್ ಜೊತೆ ಕೈಜೋಡಿಸುವುದಿಲ್ಲ ಎಂದು ಎಂದು ತಿಳಿಸಿದರು.
ಪಕ್ಷವನ್ನು ಬೆಳೆಸಲು ಏಪ್ರಿಲ್ 10ರಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗುತ್ತಿದೆ. ಮುಂಬರುವ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್‌ಚುನಾವಣೆಗಳಲ್ಲಿ ಸಮಾಜವಾದಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಬಂಗಾರಪ್ಪ ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು












Click it and Unblock the Notifications