ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ಥಳೀಯ ಸಂಸ್ಥೆಗಳ ಮೇಲೆ ಒಂಬಡ್ಸ್‌ಮನ್‌ಗಳ ಕಣ್ಣು

By Staff
|
Google Oneindia Kannada News

ಸ್ಥಳೀಯ ಸಂಸ್ಥೆಗಳ ಮೇಲೆ ಒಂಬಡ್ಸ್‌ಮನ್‌ಗಳ ಕಣ್ಣು
ಪಂಚಾಯತ್‌ ರಾಜ್‌ ಸಂಸ್ಥೆಗಳಿಗೆ 2320ಕೋಟಿ ಅನುದಾನ -ಎಸ್‌.ಸಿ.ಮಹದೇವಪ್ಪ

ಬೆಂಗಳೂರು : ಪಂಚಾಯತ್‌ರಾಜ್‌ ಸಂಸ್ಥೆಗಳ ಆಡಳಿತದ ಮೇಲೆ ನಿಗಾ ಇಡಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಂಬಡ್ಸ್‌ಮನ್‌ಗಳ ನೇಮಕ ಮಾಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಡಾ.ಎಸ್‌.ಸಿ. ಮಹದೇವಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ವಿಕೇಂದ್ರೀಕರಣದ ಹಿನ್ನೆಲೆ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಸರ್ಕಾರ ಈಗ ಹೆಚ್ಚಿನ ಅನುದಾನವನ್ನು ನೀಡುತ್ತಿದೆ. ಅದರ ಸಮರ್ಪಕ ನಿರ್ವಹಣೆಗೆ ಈ ಕ್ರಮ ಅನಿವಾರ್ಯ ಎಂದರು.

ಪ್ರಸ್ತುತ ಪಂಚಾಯತ್‌ರಾಜ್‌ ಸಂಸ್ಥೆಗಳಿಗೆ ಸುಮಾರು 2320ಕೋಟಿ ರೂಪಾಯಿ ಹಣ ವರ್ಗಾವಣೆಯಾಗುತ್ತಿದೆ. ಒಂಬಡ್ಸ್‌ಮನ್‌ಗಳು ಲೋಕಾಯುಕ್ತರ ರೀತಿಯಲ್ಲಿ ಕಾರ್ಯನಿರ್ವಹಿಸಿ, ಸರ್ಕಾರಿ ಹಣ ಸೋರಿಕೆಯಾಗದಂತೆ ಎಚ್ಚರವಹಿಸುವರು ಎಂದು ಸಚಿವರು ಅಭಿಪ್ರಾಯಪಟ್ಟರು.
(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X