ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸದ್ಯದಲ್ಲಿಯೇ 2,462 ಪ್ರೌಢಶಾಲಾ ಶಿಕ್ಷಕರ ನೇಮಕ

By Staff
|
Google Oneindia Kannada News

ಸದ್ಯದಲ್ಲಿಯೇ 2,462 ಪ್ರೌಢಶಾಲಾ ಶಿಕ್ಷಕರ ನೇಮಕ
ರಾಜ್ಯದಲ್ಲಿ 22 ಸಾವಿರ ಶಾಲಾಕೊಠಡಿಗಳ ಅಗತ್ಯವಿದೆ -ರಾಮಲಿಂಗಾ ರೆಡ್ಡಿ

ಬೆಂಗಳೂರು : ರಾಜ್ಯ ಸರ್ಕಾರವು ಸದ್ಯದಲ್ಲಿಯೇ 2, 462 ಪ್ರೌಢ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಿದೆ. ಈ ಸಂಬಂಧ ಮೇ.15ರಂದು ಅಧಿಸೂಚನೆ ಹೊರಬೀಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ 7000 ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಮುಂಬರುವ 2006ರಲ್ಲಿ 10, 000 ಶಿಕ್ಷಕರು ನಿವೃತ್ತಿ ಹೊಂದಲಿದ್ದಾರೆ. ಹೀಗಾಗಿ ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದರು.

ರಾಜ್ಯದಲ್ಲಿ 22,000 ಶಾಲಾಕೊಠಡಿಗಳ ಅಗತ್ಯವಿದ್ದು, 13, 000 ಕೊಠಡಿಗಳ ಕಾಮಗಾರಿ ಪ್ರಗತಿಯಲ್ಲಿದೆ. 2005- 06ರಲ್ಲಿ ಪ್ರಾಥಮಿಕ ಶಾಲೆಗಳ ನಿರ್ಮಾಣಕ್ಕೆ ಸರ್ಕಾರ 435 ಕೋಟಿ ರೂ.ಹಣವನ್ನು ಬಿಡುಗಡೆ ಮಾಡಿದೆ ಎಂದು ಶಿಕ್ಷಣ ಸಚಿವರು ತಿಳಿಸಿದರು.
(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X