ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಾಸನದ ಅಕ್ರಮ ಪಟಾಕಿ ಮಳಿಗೆಯಲ್ಲಿ ಬೆಂಕಿ: 8 ಸಾವು

By Staff
|
Google Oneindia Kannada News

ಹಾಸನದ ಅಕ್ರಮ ಪಟಾಕಿ ಮಳಿಗೆಯಲ್ಲಿ ಬೆಂಕಿ: 8 ಸಾವು
ಗಾಯಗೊಂಡ ಹತ್ತು ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ, ಇಬ್ಬರ ಸ್ಥಿತಿ ಗಂಭೀರ

ಹಾಸನ : ಅಗ್ನಿ ಆಕಸ್ಮಿಕವೊಂದರಲ್ಲಿ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿರುವ ಘಟನೆ ನಗರದಲ್ಲಿ ಸೋಮವಾರ ನಡೆದಿದೆ.

ನಗರದಲ್ಲಿನ ಅಕ್ರಮ ಪಟಾಕಿ ತಯಾರಿಕಾ ಕೇಂದ್ರದಲ್ಲಿ ಈ ದುರಂತ ಸಂಭವಿಸಿದೆ. ಅಗ್ನಿ ಆಕಸ್ಮಿಕದಲ್ಲಿ ಅಡಿಗೆ ಅನಿಲದ ಸಿಲಿಂಡರ್‌ ಸ್ಪೋಟಗೊಂಡ ಕಾರಣ, ಅಕ್ಕಪಕ್ಕದ ನಾಲ್ಕೈದು ಮನೆಗಳು ಹಾನಿಗೊಳಗಾಗಿವೆ.

ಈ ಮನೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಅಕ್ರಮವಾಗಿ ಪಟಾಕಿಯನ್ನು ತಯಾರಿಸಲಾಗುತ್ತಿತ್ತು. ನೆರೆಯ ಹಳ್ಳಿಗಳಿಗೆ ಹಬ್ಬಹರಿದಿನಗಳಿಗಾಗಿ ಅವುಗಳನ್ನು ಸರಬರಾಜು ಮಾಡಲಾಗುತ್ತಿತ್ತು ಎಂದು ಪೋಲಿಸರು ತಿಳಿಸಿದ್ದಾರೆ.

ದುರಂತದಲ್ಲಿ ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದರಲ್ಲಿ ಇಬ್ಬರ ಸ್ಥಿತಿ ತೀವ್ರ ಗಂಭೀರವಾಗಿದೆ. ಅಗ್ನಿ ಆಕಸ್ಮಿಕಕ್ಕೆ ಸೂಕ್ತ ಕಾರಣ ತಿಳಿದು ಬಂದಿಲ್ಲ.

(ಏಜನ್ಸೀಸ್‌)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X