ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ

By Staff
|
Google Oneindia Kannada News

ರಾಜ್ಯ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ
ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಸರ್ಕಾರದ ಆದೇಶ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಮೂಲ ವೇತನದ ಶೇ.3ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸಿರುವುದಾಗಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಹಾಲಿ ತುಟ್ಟಿಭತ್ಯೆ ದರವನ್ನು ಮೂಲ ವೇತನದ ಶೇ.64ರಿಂದ 67ಕ್ಕೆ ಹೆಚ್ಚಿಸಲಾಗಿದೆ. ಕಳೆದ ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಿಸಿದೆ.

ಮಾರ್ಚ್‌ವರೆಗಿನ ತುಟ್ಟಿ ಭತ್ಯೆಯನ್ನು ಉಳಿತಾಯ ಖಾತೆಗೆ ಜಮಾ ಮಾಡಲಾಗುವುದು. ಏಪ್ರಿಲ್‌ ನಂತರದ ತಿಂಗಳುಗಳ ತುಟ್ಟಿ ಭತ್ಯೆಯನ್ನು ನಗದು ರೂಪದಲ್ಲಿಯೇ ನೀಡುವುದಾಗಿ ಪ್ರಕಟಣೆ ತಿಳಿಸಿದೆ. ಸರ್ಕಾರದ ಕ್ರಮಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ಮೆಚ್ಚುಗೆ ವ್ಯಕ್ತಪಡಿಸಿದೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X