ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜು.2ರಿಂದ ದೇವನಹಳ್ಳಿ ವಿಮಾನ ನಿಲ್ದಾಣ ಕಾಮಗಾರಿ

By Staff
|
Google Oneindia Kannada News

ಜು.2ರಿಂದ ದೇವನಹಳ್ಳಿ ವಿಮಾನ ನಿಲ್ದಾಣ ಕಾಮಗಾರಿ
2008ರಲ್ಲಿ ಅಂ.ರಾ.ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ -ಪಿ.ಜಿ.ಆರ್‌.ಸಿಂಧ್ಯ

ಬೆಂಗಳೂರು : ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾಮಗಾರಿ ಜುಲೈ 2ರಿಂದ ಪೂರ್ಣ ಪ್ರಮಾಣದಲ್ಲಿ ಆರಂಭಗೊಳ್ಳಲಿದೆ ಎಂದು ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯ ಸಚಿವ ಪಿ.ಜಿ.ಆರ್‌.ಸಿಂಧ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1411.08ಕೋಟಿ ರೂ. ವೆಚ್ಚದ ಈ ಯೋಜನೆಯ ಮೊದಲ ಹಂತದ ಕಾಮಗಾರಿ 30 ತಿಂಗಳಲ್ಲಿ ಪೂರ್ಣಗೊಳ್ಳಲಿದೆ. 2008ರ ಏಪ್ರಿಲ್‌ನಲ್ಲಿ ಕಾಮಗಾರಿ ಪೂರ್ಣಗೊಂಡು ವಿಮಾನ ಸಂಚಾರ ಆರಂಭಗೊಳ್ಳಲಿದೆ ಎಂದರು.

ಮೊದಲ ಹಂತದಲ್ಲಿ 4ಸಾವಿರ ಮೀಟರ್‌ ಉದ್ದದ ರನ್‌ವೇ, ವಿಮಾನ ಮಾರ್ಗ, ವಿಮಾನ ತಂಗುದಾಣ ಸೇರಿದಂತೆ ಇತರೆ ಮೂಲಭೂತ ಸೌಲಭ್ಯವನ್ನು ಅಭಿವೃದ್ಧಿ ಪಡಿಸಲಾಗುವುದು. ಯೋಜನೆಗಾಗಿ 3800 ಎಕರೆ ಭೂಮಿಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಸಿಂಧ್ಯ ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ಬೆಂಗಳೂರು ಡೈರಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X