ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರದ ಅಭಯ

By Staff
|
Google Oneindia Kannada News

ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರದ ಅಭಯ
ರಾಜ್ಯದಲ್ಲಿ ಒಂದು ಲಕ್ಷ ಸಕ್ರಿಯ ಸ್ತ್ರೀಶಕ್ತಿ ಸಂಘಗಳು -ಸಿದ್ದರಾಮಯ್ಯ

ಮೈಸೂರು : ಅಸಮರ್ಪಕ ಪಾವತಿ ವ್ಯವಸ್ಥೆಯನ್ನು ತಪ್ಪಿಸಿ, ಆಯಾ ತಿಂಗಳೇ ಅಂಗನವಾಡಿ ಕಾರ್ಯಕರ್ತೆರಿಗೆ ಗೌರವ ಧನ ಪಾವತಿಸಲು ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮಹಿಳಾ ಸಮೃದ್ಧಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಅಂಗನವಾಡಿ ಕಾರ್ಯಕರ್ತೆಯರನ್ನು, ನಗರದಲ್ಲಿ ನಡೆದ ಸಮಾರಂಭದಲ್ಲಿ ಅಭಿನಂದಿಸಿ ಅವರು ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಮಾಸಿಕ 1,450ರೂ.ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನವಾಗಿ ನೀಡುತ್ತಿದೆ. ಆದರೆ ಆ ಹಣ ಅಂಗನವಾಡಿ ಕಾರ್ಯಕರ್ತೆಯರಿಗೆ ನಾಲ್ಕು ತಿಂಗಳಿಗೋ ಅಥವಾ ಐದು ತಿಂಗಳಿಗೋ ಲಭ್ಯವಾಗುತ್ತಿದೆ. ಈ ಅಸಮರ್ಪಕ ಪದ್ಧತಿಯನ್ನು ಸುಧಾರಿಸುವುದಾಗಿ ಹೇಳಿದರು.

ರಾಜ್ಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಸ್ತ್ರೀಶಕ್ತಿ ಸಂಘಗಳಿದ್ದು, ಅವುಗಳ ಬೆಳವಣಿಕೆಗೆ ಅಂಗನವಾಡಿ ಕಾರ್ಯಕರ್ತೆಯರ ಶ್ರಮವೇ ಮೂಲ ಕಾರಣ. ಆರೋಗ್ಯಕರ ಸಮಾಜದಲ್ಲಿ ಗಣನೀಯ ಸೇವೆಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳದ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಗ್ರಾಮೀಣಾಭಿವೃದ್ಧಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಶಾಸಕ ಎಂ.ಕೆ.ಸೋಮಶೇಖರ್‌, ಮೇಯರ ಭಾರತಿ ಮತ್ತಿತರರು ಸಮಾರಂಭದಲ್ಲಿ ಹಾಜರಿದ್ದರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X