ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶೀಘ್ರದಲ್ಲಿಯೇ ಒಂದು ಸಾವಿರ ನರ್ಸ್‌ಗಳ ನೇಮಕ

By Staff
|
Google Oneindia Kannada News

ಶೀಘ್ರದಲ್ಲಿಯೇ ಒಂದು ಸಾವಿರ ನರ್ಸ್‌ಗಳ ನೇಮಕ
ಮನೆಗೊಂದು ಮಗು ನೀತಿ ಜಾರಿಗೆ ಸರ್ಕಾರದ ಚಿಂತನೆ -ಸಿದ್ದರಾಮಯ್ಯ

ಬೆಂಗಳೂರು : ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಆಸ್ಪತ್ರೆಗಳಲ್ಲಿ ಗಣನೀಯ ಸಂಖ್ಯೆಯಲ್ಲಿ ನರ್ಸ್‌ಗಳ ಕೊರತೆ ಕಂಡುಬಂದಿದೆ. ಈ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಒಂದು ಸಾವಿರ ನರ್ಸ್‌ಗಳ ನೇಮಕಕ್ಕೆ ಸರ್ಕಾರ ನಿರ್ಧರಿಸಿದೆ ಎಂದು ಉಪಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಚೀನಾ ದೇಶದಂತೆಯೇ ಜನಸಂಖ್ಯೆ ನಿಯಂತ್ರಣಕ್ಕೆ ಸರ್ಕಾರ ಮುಂದಾಗಿದೆ. ಮನೆಗೊಂದು ಮಗು ಎಂಬ ನೀತಿಯನ್ನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ಜನಸಂಖ್ಯಾ ಓಟ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಎನ್‌. ಚೆಲುವ ರಾಯಸ್ವಾಮಿ ಉದ್ಘಾಟಿಸಿದರು.
(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X