ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎತ್ತಿಗೆ ಜ್ವರವೆಂದು ಎಮ್ಮೆಗೆ ಬರೆ : ಶಿಕ್ಷಕರ ಗೋಳು

By Staff
|
Google Oneindia Kannada News

ಎತ್ತಿಗೆ ಜ್ವರವೆಂದು ಎಮ್ಮೆಗೆ ಬರೆ : ಶಿಕ್ಷಕರ ಗೋಳು
ಕಳಪೆ ಫಲಿತಾಂಶಕ್ಕೆ ಶಿಕ್ಷಕರೇ ಹೊಣೆ, ಆ ಶಾಲೆಗಳ ಶಿಕ್ಷಕರಿಗೆ ವಾರ್ಷಿಕ ಬಡ್ತಿ ಕಡಿತ

ಬೆಂಗಳೂರು : ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.40ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಹಾಗೂ ಶಿಕ್ಷಕರಿಗೆ ವಾರ್ಷಿಕ ಬಡ್ತಿ ತಡೆಹಿಡಿಯುವ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿವೆ.

ರಾಜ್ಯ ಪ್ರೌಢ ಶಾಲಾ ಶಿಕ್ಷಕರ ಸಂಘ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿದೆ. ವಿಧ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸದ ಸರ್ಕಾರ, ಕಡಿಮೆ ಫಲಿತಾಂಶಕ್ಕೆ ಶಿಕ್ಷಕರನ್ನು ಬಲಿಪಶು ಮಾಡುತ್ತಿದೆ. ಸರ್ಕಾರ ನಿರ್ಧಾರ ಬದಲಿಸಿದಿದ್ದರೆ ರಾಜ್ಯದ್ಯಂತ ಪ್ರತಿಭಟನೆ ನಡೆಸುವುದಾಗಿ ಸಂಘ ಎಚ್ಚರಿಸಿದೆ.

ರಾಜ್ಯದ 454 ಸರ್ಕಾರಿ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇ.40ಕ್ಕಿಂತ ಕಡಿಮೆ ಇದೆ. ಆ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಹಾಗೂ ಶಿಕ್ಷಕರಿಗೆ ವಾರ್ಷಿಕ ಬಡ್ತಿ ತಡೆಹಿಡಿಯಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ಇತ್ತೀಚೆಗಷ್ಟೇ ವಿಧಾನ ಪರಿಷತ್ತಿನಲ್ಲಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವರ ತೀರ್ಮಾನಕ್ಕೆ ಶಿಕ್ಷಕರ ಸಂಘ ಖಂಡಿಸಿದೆ.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X