ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೊಲೀಸ್‌ ದೌರ್ಜನ್ಯ ವಿರೋಧಿಸಿ ಶ್ರೀಪತಿ ಧರಣಿ

By Staff
|
Google Oneindia Kannada News

ಪೊಲೀಸ್‌ ದೌರ್ಜನ್ಯ ವಿರೋಧಿಸಿ ಶ್ರೀಪತಿ ಧರಣಿ
ಅನವಶ್ಯಕವಾಗಿ ಬಂಧಿಸಿ, ನನ್ನನ್ನು ಹಿಂಸಿಸಿದ ಪೊಲೀಸರಿಗೆ ಶಿಕ್ಷೆಯಾಗಲಿ -ಶ್ರೀಪತಿರಾವ್‌

ಬೆಂಗಳೂರು : ನನ್ನನ್ನು ಕಾನೂನು ಬಾಹಿರವಾಗಿ ಬಂಧಿಸಿ, ಮಾನಸಿಕ ಹಿಂಸೆ ನೀಡಿದ ಪೊಲೀಸ್‌ ಅಧಿಕಾರಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳದಿದ್ದರೆ, ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಂಯುಕ್ತ ಜನತಾದಳದ ಪ್ರಧಾನ ಕಾರ್ಯದರ್ಶಿ ಬಿ.ಶ್ರೀಪತಿ ರಾವ್‌ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ಕಾನೂನು ವಿರೋಧಿ ಕೆಲಸಗಳನ್ನು ಆಕ್ಷೇಪಿಸ ಕಾರಣ ನನ್ನನ್ನು ಪೊಲೀಸರು ಬಂಧಿಸಿದ್ದರು. ಅಲ್ಲದೇ ಭಯೋತ್ಪಾದನೆ ವಿರುದ್ಧ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಹಲ್ಲೆ ನಡೆಸಿದರು ಎಂದರು.

ಪೊಲೀಸರ ಈ ಅಮಾನವೀಯ ನೀತಿ ಖಂಡಿಸಿ ಜೂನ್‌ 28ರಂದು ನಗರ ಪೊಲೀಸ್‌ ಆಯುಕ್ತರಿಗೆ ದೂರು ಸಲ್ಲಿಸಿದ್ದರೂ ಫಲ ಸಿಕ್ಕಿಲ್ಲ. ಒಂದು ವೇಳೆ ಈ ದೂರಿಗೆ ಸರಿಯಾದ ಪ್ರತಿಕ್ರಿಯೆ ದೊರೆಯದಿದ್ದಲ್ಲ್ಲಿ, ಜುಲೈ 24ರಂದು ಮಹಾತ್ಮಾಗಾಂಧಿ ರಸ್ತೆಯ ಗಾಂಧಿ ಪ್ರತಿಮೆಯ ಎದುರು ಸಾಂಕೇತಿಕ ಧರಣಿ ನಡೆಸಲಾಗುವುದು.

ಒಂದು ವೇಳೆ ಧರಣಿಯ ನಂತರವೂ ಸರ್ಕಾರ ಎಚ್ಚೆತ್ತು ಕೊಳ್ಳದಿದ್ದರೆ, ಆಗಸ್ಟ್‌ 1ರಿಂದ ಗಾಂಧಿ ಪ್ರತಿಭೆಯ ಬಳಿ ಅನಿರ್ದಿಷ್ಟ ಕಾಲ ಉಪವಾಸ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಶ್ರೀಪತಿರಾವ್‌ ಎಚ್ಚರಿಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X