ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರತಿ ವಿಧಾನಸಭಾ ಕ್ಷೇತ್ರಕ್ಕೊಂದು ಮೊರಾರ್ಜಿ ಶಾಲೆ

By Staff
|
Google Oneindia Kannada News

ಪ್ರತಿ ವಿಧಾನಸಭಾ ಕ್ಷೇತ್ರಕ್ಕೊಂದು ಮೊರಾರ್ಜಿ ಶಾಲೆ
ಪರಿಶಿಷ್ಟರ ಹೆಸರಲ್ಲಿ ಸುಳ್ಳು ಪ್ರಮಾಣ ಪತ್ರಗಳ ಮೂಲಕ ವಂಚಿಸುವವರ ಬಗ್ಗೆ ನಿರ್ದಾಕ್ಷಿಣ್ಯ ಕ್ರಮ - ನಾಗಪ್ಪ

ಬೆಂಗಳೂರು : ಪ್ರತಿ ವಿಧಾನಸಭಾ ಕ್ಷೇತ್ರಕ್ಕೊಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ ತೆರೆಯಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ವೈ.ನಾಗಪ್ಪ ಹೇಳಿದ್ದಾರೆ.

ಅವರು ವಿಧಾನಸಭೆಯಲ್ಲಿ ಮಾತನಾಡುತ್ತ ಈ ವಿಷಯ ಪ್ರಕಟಿಸಿದರು. ಇಲಾಖೆ ಬೇಡಿಕೆಗಳ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಈ ಯೋಜನೆಯನ್ನು ಹಂತಹಂತವಾಗಿ ಹೋಬಳಿ ಮಟ್ಟಕ್ಕೂ ವಿಸ್ತರಿಸಲು ಸರ್ಕಾರ ಉದ್ದೇಶಿಸಿದೆ ಎಂದರು.

ಮೆಟ್ರಿಕ್‌ ಪೂರ್ವ ಹಾಗೂ ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆಯನ್ನು ಶೇ.10ರಷ್ಟು ಹೆಚ್ಚಿಸಲು ಮೌಖಿಕ ಆದೇಶ ನೀಡಲಾಗಿದೆ. ಪರಿಶಿಷ್ಟರ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X