ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ ನಾಯಕ ಖರ್ಗೆಗೆ ಅರಮನೆ ಮೈದಾನದಲ್ಲಿ ಕಿರೀಟ

By Staff
|
Google Oneindia Kannada News

ಕಾಂಗ್ರೆಸ್‌ ನಾಯಕ ಖರ್ಗೆಗೆ ಅರಮನೆ ಮೈದಾನದಲ್ಲಿ ಕಿರೀಟ
ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಹೊಸ ಚೈತನ್ಯ - ಧರಂ

ಬೆಂಗಳೂರು : ನನ್ನ ಮುಂದೆ ದೊಡ್ಡ ಸವಾಲಿದೆ. ಅದನ್ನು ಸಮರ್ಥವಾಗಿ ಎದುರಿಸಲು ಎಲ್ಲರ ಸಹಕಾರ ಅತ್ಯಗತ್ಯ. ಸ್ವಬಲದಿಂದ ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಅರಮನೆ ಮೈದಾನದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಬೃಹತ್‌ ಸಭೆಯಲ್ಲಿ , ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಅವರು, ಸಭೆಯನ್ನುದ್ದೇಶಿಸಿ ಮಾತನಾಡಿದರು.

ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಮೈತ್ರಿಕೂಟದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ ತನ್ನ ಸಾಮಾರ್ಥ್ಯ ಪ್ರದರ್ಶಿಸಲಿದೆ ಎಂದರು.

ಮುಖ್ಯಮಂತ್ರಿ ಧರ್ಮಸಿಂಗ್‌ ಮಾತನಾಡಿ, ಖರ್ಗೆ ಅಧಿಕಾರವಹಿಸಿಕೊಂಡ ನಂತರ ಪಕ್ಷಕ್ಕೆ ಹೊಸ ಚೈತನ್ಯ ಬಂದಿದೆ. ಹೊಸ ಅಧ್ಯಾಯ ಆರಂಭಗೊಂಡಿದೆ. ಕಾಂಗ್ರೆಸ್‌ ಎಲ್ಲಿದೆ ಎಂಬ ಪ್ರಶ್ನೆಗೆ ಇಲ್ಲಿನ ಲಕ್ಷಾಂತರ ಜನ ಉತ್ತರ ನೀಡಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಎಚ್‌.ಕೆ.ಪಾಟೀಲ್‌, ಕೆ.ಎಚ್‌.ರಂಗನಾಥ್‌, ಡಿ.ಕೆ.ಶಿವಕುಮಾರ್‌ ಅಂಬರೀಷ್‌, ವಿ.ಎಸ್‌.ಕೌಜಲಗಿ, ಅಲ್ಲಂ ವೀರಭದ್ರಪ್ಪ ಸೇರಿದಂತೆ ಮತ್ತಿತರ ಕಾಂಗ್ರೆಸ್‌ ಮುಖಂಡರು ಸಭೆಯಲ್ಲಿ ಹಾಜರಿದ್ದರು.

ನಿರ್ಣಯ : ಪಕ್ಷವನ್ನು ಬಲಪಡಿಸುವುದು, ಮಲ್ಲಿಕಾರ್ಜುನ ಖರ್ಗೆ ಮತ್ತು ಸೋನಿಯಾ ನಾಯಕತ್ವಕ್ಕೆ ಬೆಂಬಲ, ಕಾಂಗ್ರೆಸ್‌ ಸಾಧನೆ ಪ್ರಚಾರ ಮಾಡುವ ನಿರ್ಣಯವನ್ನು ಸಭೆ ಕೈಗೊಂಡಿತು. ಸರ್ಕಾರದ ಪಾಲುದಾರ ಪಕ್ಷವಾದ ಜೆಡಿಎಸ್‌ನಲ್ಲಿನ ಗೊಂದಲಗಳ ನಡುವೆ ಕಾಂಗ್ರೆಸ್‌ ಅಧ್ಯಕ್ಷರಾಗಿ ಖರ್ಗೆ ಅಧಿಕಾರ ಸ್ವೀಕರಿಸಿದ್ದಾರೆ.

ಕೆಪಿಸಿಸಿ ನಿಕಟ ಪೂರ್ವ ಅಧ್ಯಕ್ಷ ಜನಾರ್ದನ ಪೂಜಾರಿ, ಖರ್ಗೆ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಲಕ್ಷಾಂತರ ಕಾರ್ಯಕರ್ತರು ಕಾಂಗ್ರೆಸ್‌ ಬಲ ಪ್ರದರ್ಶಿಸುವಂತೆ ಸಭೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು.

(ಪಿಟಿಐ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X