ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್ಸೆಸ್ಸೆಲ್ಸಿ ಹೊಸ ಪರೀಕ್ಷಾ ಪದ್ಧತಿ :ನಕಲು ಸುಲಭವೇ?

By Staff
|
Google Oneindia Kannada News

ಎಸ್ಸೆಸ್ಸೆಲ್ಸಿ ಹೊಸ ಪರೀಕ್ಷಾ ಪದ್ಧತಿ :ನಕಲು ಸುಲಭವೇ?
2006ರಿಂದ ಹೊಸ ವ್ಯವಸ್ಥೆ ಜಾರಿ -ರಾಮಲಿಂಗಾರೆಡ್ಡಿ

ಬೆಂಗಳೂರು : ಎಸ್‌ಎಸ್‌ಎಲ್‌ಸಿಯಲ್ಲಿ ಬಹು ಆಯ್ಕೆ ಪ್ರಶ್ನೋತ್ತರಗಳ ಹೊಸ ಮಾದರಿ ಪದ್ಧತಿಯನ್ನು 2006ರಿಂದ ಅನುಷ್ಠಾನಗೊಳಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪದ್ಧತಿಯಿಂದ ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ನಕಲಿಗೆ ಅವಕಾಶವಾಗದಂತೆ ಹತ್ತು ಮಾದರಿಯ ಪ್ರಶ್ನೆ ಪತ್ರಿಕೆಗಳನ್ನು ಬಳಸಲಾಗುವುದು ಎಂದರು.

ಪ್ರಥಮ ಭಾಷೆಗೆ 125 ಅಂಕಗಳನ್ನು ನಿಗದಿಪಡಿಸಲಾಗಿದ್ದು, 63 ಅಂಕಗಳಿಗೆ ಬಹುಆಯ್ಕೆ ಪ್ರಶ್ನೆಗಳಿರುವತ್ತವೆ. ಉಳಿದ 62 ಅಂಕಗಳಿಗೆ ವಿವರಣಾತ್ಮಕ ಪ್ರಶ್ನೆಗಳಿರುತ್ತವೆ. ದ್ವಿತೀಯ ಭಾಷೆ ಮತ್ತು ತೃತೀಯ ಭಾಷೆಯಲ್ಲಿ 50ಅಂಕಗಳಿಗೆ ಬಹು ಆಯ್ಕೆಪ್ರಶ್ನೆಗಳು ಮತ್ತು 50ಅಂಕಗಳಿಗೆ ವಿವರಣಾತ್ಮಕ ಪ್ರಶ್ನೆಗಳಿರುತ್ತವೆ ಎಂದು ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X