ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿದ್ಯುನ್ಮಾನ ಮಾಧ್ಯಮದ ಬಗ್ಗೆ ಹೊಸ ಕೋರ್ಸ್‌

By Staff
|
Google Oneindia Kannada News

ವಿದ್ಯುನ್ಮಾನ ಮಾಧ್ಯಮದ ಬಗ್ಗೆ ಹೊಸ ಕೋರ್ಸ್‌
ಬೆಂಗಳೂರು ವಿವಿಯಿಂದ ಎಫ್‌ಎಂ ರೇಡಿಯೋ ಸ್ಟೇಷನ್‌

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯವು ಪ್ರಸಕ್ತ ಸಾಲಿನಿಂದ ವಿದ್ಯುನ್ಮಾನ ಮಾಧ್ಯಮದಲ್ಲಿ 1ವರ್ಷದ ಸ್ನಾತಕೋತ್ತರ ಡಿಪ್ಲೋಮಾ ಕೋರ್ಸನ್ನು ಆರಂಭಿಸಲಿದೆ.

ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಂ.ಎಸ್‌.ತಿಮ್ಮಪ್ಪ , ಮೂರು ವರ್ಷದ ಹಿಂದೆ ಪ್ರಾರಂಭವಾದ ವಿದ್ಯುನ್ಮಾನ ಮಾಧ್ಯಮ ವಿಭಾಗದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ಶೇ100ರಷ್ಟು ಉದ್ಯೋಗ ಅವಕಾಶಗಳನ್ನು ಪಡೆದುಕೊಂಡಿದ್ದಾರೆ. ಈ ಯಶಸ್ಸಿನಿಂದ ಉತ್ತೇಜನಗೊಂಡು ಡಿಪ್ಲೋಮಾ ಕೋರ್ಸು ಆರಂಭಿಸಲಾಗುತ್ತಿದೆ ಎಂದರು.

ಈ ಡಿಪ್ಲೋಮಾ ಕೋರ್ಸು ಸ್ವ ಹಣಕಾಸಿನ ಕೋರ್ಸು ಆಗಿದ್ದು, ಸಂಜೆ ಅವಧಿಯಲ್ಲಿ ತರಗತಿಗಳು ನಡೆಯಲಿವೆ. ಇದಕ್ಕೆ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ ಎಂದು ವಿವರಿಸಿದರು.

ದೂರ ಶಿಕ್ಷಣ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಫ್‌ಎಂ ರೇಡಿಯೋ ಕೇಂದ್ರವನ್ನು ವಿಶ್ವವಿದ್ಯಾಲಯ ಆರಂಭಿಸುತ್ತಿದೆ. ಶೈಕ್ಷಣಿಕ ವಿಚಾರಗಳನ್ನು ಪ್ರಸಾರ ಮಾಡುವ ಈ ರೇಡಿಯೋ ಪ್ರಾರಂಭದಲ್ಲಿ ದಿನಕ್ಕೆ 4ಗಂಟೆ ಸೇವೆ ನೀಡಲಿದೆ ಎಂದು ತಿಮ್ಮಪ್ಪ ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ವಾಟ್ಸ್‌ ಹಾಟ್‌

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X