ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರ್‌ಎಸ್‌ಎಸ್‌ ಮುಖಂಡ ಶೇಷಾದ್ರಿ ಸ್ಥಿತಿ ಗಂಭೀರ

By Staff
|
Google Oneindia Kannada News

ಆರ್‌ಎಸ್‌ಎಸ್‌ ಮುಖಂಡ ಶೇಷಾದ್ರಿ ಸ್ಥಿತಿ ಗಂಭೀರ
ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ, ಕೃತಕ ಉಸಿರಾಟಕ್ಕೆ ವ್ಯವಸ್ಥೆ

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್‌)ದ ಪ್ರಮುಖ ನಾಯಕರಲ್ಲಿ ಒಬ್ಬರಾದ ಎಚ್‌.ವಿ.ಶೇಷಾದ್ರಿ ಅವರ ದೇಹ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ಗುರುವಾರ ತಿಳಿಸಿವೆ.

ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಅವರಿಗೆ ಪ್ರಸ್ತುತ ಕೃತಕ ಉಸಿರಾಟ ವ್ಯವಸ್ಥೆಯನ್ನು ಒದಗಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಶೇಷಾದ್ರಿ ಅವರನ್ನು ಚಿಕಿತ್ಸೆಗಾಗಿ ಹತ್ತು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರ್‌ಎಸ್‌ಎಸ್‌ ಮೂಲಗಳು ತಿಳಿಸಿವೆ.

ಅಖಿಲ ಭಾರತ್‌ ಪ್ರಚಾರಕ್‌ನ ಪ್ರಮುಖರೂ ಆಗಿರುವ ಶೇಷಾದ್ರಿ, ಈ ಹಿಂದೆ ಆರ್‌ಎಸ್‌ಎಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆಸಲ್ಲಿಸಿದ್ದರು.

(ಪಿಟಿಐ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X