ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹವಾಮಾನ ವೈಪರೀತ್ಯದಿಂದ ಪ್ರಧಾನಿ ಭೇಟಿ ರದ್ದು

By Staff
|
Google Oneindia Kannada News

ಹವಾಮಾನ ವೈಪರೀತ್ಯದಿಂದ ಪ್ರಧಾನಿ ಭೇಟಿ ರದ್ದು
1900ಕೋಟಿ ರೂಪಾಯಿ ಪರಿಹಾರ ಧನಕ್ಕೆ ರಾಜ್ಯದ ಬೇಡಿಕೆ

ಬೆಳಗಾವಿ : ವಾತಾವರಣದ ವೈಪರೀತ್ಯದಿಂದ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಉತ್ತರ ಕರ್ನಾಟಕದ ಜಲಾವೃತ ಪ್ರದೇಶಗಳನ್ನು ವೀಕ್ಷಿಸುವ ತಮ್ಮ ವೈಮಾನಿಕ ಸಮೀಕ್ಷಾ ಕಾರ್ಯವನ್ನು ಮುಂದೂಡಿದ್ದಾರೆ.

ಅವರು ಮಂಗಳವಾರ ಸಮೀಕ್ಷೆಗಾಗಿ ತೆರಳ ಬೇಕಾಗಿತ್ತು, ಆದರೆ ಹವಮಾನದಲ್ಲಿನ ವೈಪರೀತ್ಯದಿಂದಾಗಿ ಅವರ ಪ್ರಯಾಣ ರದ್ದಾಗಿರುವುದಾಗಿ ಮೂಲಗಳು ತಿಳಿಸಿವೆ.

ಇತ್ತೀಚೆಗಷ್ಟೇ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವೈಮಾನಿಕ ಸಮೀಕ್ಷೆ ನಡೆಸಿ ಪ್ರವಾಹ ಪೀಡಿತ ಪ್ರದೇಶದ ಜನರನ್ನು ಭೇಟಿ ಮಾಡಿದ್ದರು. ಈಗ ಪ್ರಧಾನಿ ಮನಮೋಹನ್‌ ಸಿಂಗ್‌ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಾದ ಬೆಳಗಾವಿ, ಗುಲ್ಬರ್ಗಾ ಮತ್ತು ಬಾಗಲಕೋಟೆ ಮುಂತಾದೆಡೆ ವೈಮಾನಿಕ ಸಮೀಕ್ಷೆ ನಡೆಸಬೇಕಿತ್ತು.

ಬೆಳಗಾವಿ, ಗುಲ್ಬರ್ಗಾ, ಬಾಗಲಕೋಟೆ, ಬಿಜಾಪುರ ಮತ್ತು ರಾಯಚೂರು ಸೇರಿದಂತೆ ಇತರೆ ಪ್ರದೇಶದಲ್ಲಿ 29ಲಕ್ಷಕ್ಕಿಂತ ಹೆಚ್ಚು ಜನರು ಪ್ರವಾಹದಲ್ಲಿ ಸಿಲುಕಿದ್ದು, 126 ಜನ ಸಾವನ್ನಪ್ಪಿದ್ದಾರೆ. ರಾಜ್ಯವು 1,900 ಕೋಟಿ ರೂಪಾಯಿಗಳಷ್ಟು ಪರಿಹಾರ ಧನ ಬಿಡುಗಡೆ ಮಾಡುವಂತೆ, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ.

(ಪಿಟಿಐ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X