ಸಿಇಟಿ ಉಳಿಸಿಕೊಳ್ಳಲು ರಾಜ್ಯ ಸರ್ಕಾರದ ಕಸರತ್ತು
ಸಿಇಟಿ ಉಳಿಸಿಕೊಳ್ಳಲು ರಾಜ್ಯ ಸರ್ಕಾರದ ಕಸರತ್ತು
ಶೇ.25ರಷ್ಟು ಮೀಸಲಾತಿ ಕಲ್ಪಿಸಲು ಖಾಸಗೀ ಕಾಲೇಜುಗಳು ಬದ್ಧ
ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಖಾಸಗೀ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ರದ್ದಾಗಿದ್ದು, ಪ್ರತಿಭಾವಂತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಮಾಜಿಕ ನ್ಯಾಯಕ್ಕಾಗಿ ಮೀಸಲಾತಿ ವ್ಯವಸ್ಥೆ ಜಾರಿಗೊಳಿಸಲು ಕೇಂದ್ರ ಸರ್ಕಾರ ಸಂವಿಧಾನ ತಿದ್ದುಪಡಿ ತರಬೇಕೆಂದು ರಾಜ್ಯ ಸಚಿವ ಸಂಪುಟ ಒತ್ತಾಯಿಸಿದೆ.
ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ಒದಗಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಸುಪ್ರೀಂಕೋರ್ಟ್ ತೀರ್ಪಿನ ಬಗೆಗೆ ಚರ್ಚಿಸಲು ಆ. 27ರಂದು ಕೇಂದ್ರ ಶಿಕ್ಷಣ ಸಚಿವರು ಸಭೆ ಕರೆದಿದ್ದಾರೆ ಎಂದು ತಿಳಿಸಿದರು.
ಮೀಸಲಾತಿ : ವೃತ್ತಿ ಶಿಕ್ಷಣ ಪ್ರವೇಶಕ್ಕೆ ಸಂಬಂಧಿಸಿದಂತೆ ಶೇ.25ರಷ್ಟು ಮೀಸಲಾತಿ ನೀಡಲು ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘ ನಿರ್ಧರಿಸಿದ್ದು, ಆ ಮೂಲಕ ಸಾಮಾಜಿಕ ನ್ಯಾಯವನ್ನು ಉಳಿಸುವುದಾಗಿ ಪ್ರಕಟಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ಧರ್ಮ-ಕಾರಣ












Click it and Unblock the Notifications