ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರತಿ ತಾಲ್ಲೂಕಿಗೊಂದು ಹೊಸ ಪ್ರೌಢಶಾಲೆ ಮತ್ತು ಕಾಲೇಜು

By Staff
|
Google Oneindia Kannada News

ಪ್ರತಿ ತಾಲ್ಲೂಕಿಗೊಂದು ಹೊಸ ಪ್ರೌಢಶಾಲೆ ಮತ್ತು ಕಾಲೇಜು
ಮುಖ್ಯಮಂತ್ರಿಗಳಿಂದ ಅನುಮೋದನೆ, ಮಂಜೂರಾತಿ ಕೋರಿ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದ 390 ಹೊಸ ಪ್ರೌಢ ಶಾಲೆ ಮತ್ತು 212 ಪದವಿಪೂರ್ವ ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಆರ್‌.ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಈ ಕುರಿತು ಶುಕ್ರವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಪ್ರತಿ ತಾಲ್ಲೂಕಿಗೊಂದು ಹೊಸ ಪ್ರೌಢಶಾಲೆ ಮತ್ತು ಕಾಲೇಜು ಸ್ಥಾಪಿಸಲು ತೀರ್ಮಾನಿಸಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ. ಅಗತ್ಯ ಹಣಕಾಸಿನ ಸಹಾಯಕ್ಕಾಗಿ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಾಂದರ ಪ್ರಕಾರ, ಕೆಲವು ಪ್ರದೇಶಗಳಲ್ಲಿ ವಿದ್ಯಾರ್ಥಿಗಳು 3ಕಿಲೋ ಮೀಟರಿಂದ ಹಿಡಿದು 20ಕಿಲೋಮೀಟರುಗಳವರೆಗೆ ನಡೆದು ಶಾಲಾಕಾಲೇಜುಗಳಿಗೆ ಹೋಗುತ್ತಿದ್ದಾರೆ. ವಿದ್ಯಾರ್ಥಿಗಳ ತೊಂದರೆಯನ್ನು ತಪ್ಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

(ಪಿಟಿಐ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X