ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಧ್ಯರಾತ್ರಿಯಿಂದಲೇ ಪೆಟ್ರೋಲ್‌, ಡೀಸೆಲ್‌ ದುಬಾರಿ

By Staff
|
Google Oneindia Kannada News

ಮಧ್ಯರಾತ್ರಿಯಿಂದಲೇ ಪೆಟ್ರೋಲ್‌, ಡೀಸೆಲ್‌ ದುಬಾರಿ
ಅಡುಗೆ ಅನಿಲ ಮತ್ತು ಸೀಮೆ ಎಣ್ಣೆ ದರ ಹೆಚ್ಚಳ ಸದ್ಯಕ್ಕಿಲ್ಲ -ಮಣಿಶಂಕರ್‌ ಆಯ್ಯರ್‌

ನವದೆಹಲಿ : ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಅನುಕ್ರಮವಾಗಿ ಲೀಟರ್‌ಗೆ 3 ಹಾಗೂ 2ರೂಪಾಯಿಗಳಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ ಮಂಗಳವಾರ ತೀರ್ಮಾನಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಮಣಿಶಂಕರ್‌ ಅಯ್ಯರ್‌, ಶೇ.7ರಷ್ಟು ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಮಂಗಳವಾರ ಮಧ್ಯರಾತ್ರಿಯಿಂದಲೇ ಹೊಸ ಬೆಲೆ ಜಾರಿಗೆ ಬರಲಿದೆ ಎಂದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಪೆಟ್ರೋಲ್‌ ಮತ್ತು ಡೀಸಲ್‌ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ್ದು, ಎಲ್‌ಪಿಜಿ ಮತ್ತು ಸೀಮೆ ಎಣ್ಣೆ ದರವನ್ನು ಹೆಚ್ಚಿಸಿಲ್ಲ . ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

(ಪಿಟಿಐ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X