ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸದ್ಯದಲ್ಲಿಯೇ ಮತ್ತೊಂದು ಶಾಕ್‌! ಪ್ರಯಾಣ ದರ ತುಟ್ಟಿ?

By Staff
|
Google Oneindia Kannada News

ಸದ್ಯದಲ್ಲಿಯೇ ಮತ್ತೊಂದು ಶಾಕ್‌! ಪ್ರಯಾಣ ದರ ತುಟ್ಟಿ?
ಕೆಎಸ್‌ಆರ್‌ಟಿಸಿಗೆ ಡಿಸೇಲ್‌ ದರ ಹೆಚ್ಚಳದಿಂದ 70ಕೋಟಿ ಹೊರೆ -ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು : ಶ್ರೀಸಾಮಾನ್ಯರಿಗೆ ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಹೆಚ್ಚಳದ ಶಾಕ್‌ನೀಡಿದರೆ, ಬಸ್‌ ಪ್ರಯಾಣದ ದರ ಹೆಚ್ಚಳದ ಮೂಲಕ ಮತ್ತೊಂದು ಶಾಕ್‌ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ!

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್‌ಗಳ ಪ್ರಯಾಣ ದರ ಹೆಚ್ಚಳದ ಬಗ್ಗೆ ಸಾರಿಗೆ ಸಚಿವ ಮಲ್ಲಿಕಾರ್ಜುನ ಖರ್ಗೆ ಸುಳಿವು ನೀಡಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಹಾಗೂ ಸರಕು ಸಾಗಣೆ ದರವನ್ನೂ ಹೆಚ್ಚಿಸುವ ಸಂಭವವಿದೆ ಎಂದು ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಅವರು, ಇಂಧನ ಬೆಲೆ ಹೆಚ್ಚಳದಿಂದ ರಾಜ್ಯ ಸಾರಿಗೆ ಸಂಸ್ಥೆಗೆ ವಾರ್ಷಿಕವಾಗಿ 70 ಕೋಟಿ ರೂ. ಮತ್ತು ಬಿಎಂಟಿಸಿಗೆ 11ಕೋಟಿ ಆರ್ಥಿಕ ಹೊರೆ ಬೀಳಲಿದೆ. ಅದನ್ನು ಸರಿದೂಗಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X