ರೆಡ್ಡಿಗೆ ಖರ್ಗೆ ತವರು ಜಿಲ್ಲೆ ಗುಲ್ಬರ್ಗದ ಉಸ್ತುವಾರಿಕೆ
ರೆಡ್ಡಿಗೆ ಖರ್ಗೆ ತವರು ಜಿಲ್ಲೆ ಗುಲ್ಬರ್ಗದ ಉಸ್ತುವಾರಿಕೆ
ಖರ್ಗೆಗೆ ಮುಕ್ತಿ , ರಾಮಲಿಂಗಾರೆಡ್ಡಿಗೆ ಹೆಚ್ಚುವರಿ ಹೊಣೆಗಾರಿಕೆ
ಈವರೆಗೆ ಜಲಸಂಪನ್ಮೂಲ ಖಾತೆ ಸಚಿವ ಮಲ್ಲಿಕಾರ್ಜುನ ಖರ್ಗೆ, ಗುಲ್ಬರ್ಗ ಜಿಲ್ಲೆಯ ಉಸ್ತುವಾರಿಯನ್ನು ಹೊತ್ತಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿರುವುದರಿಂದ ಸ್ವಂತ ಜಿಲ್ಲೆಯ ಅಭಿವೃದ್ಧಿಯ ಕಡೆ ನಿರಂತರ ಗಮನ ನೀಡಲು ಸಾಧ್ಯವಿಲ್ಲ. ಹಾಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸಬೇಕೆಂದು ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಧರ್ಮಸಿಂಗ್ ಅವರಿಗೆ ಮನವಿ ಮಾಡಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಗುಲ್ಬರ್ಗಾ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು












Click it and Unblock the Notifications