ತಾ.ಪಂ ಮತ್ತು ಜಿ.ಪಂ ಚುನಾವಣೆಗೆ ಗ್ರೀನ್ ಸಿಗ್ನಲ್
ತಾ.ಪಂ ಮತ್ತು ಜಿ.ಪಂ ಚುನಾವಣೆಗೆ ಗ್ರೀನ್ ಸಿಗ್ನಲ್
ರಾಜ್ಯ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ
ರಾಜ್ಯ ಚುನಾವಣಾ ಆಯೋಗ ರೂಪಿಸಿದ್ದ ಕ್ಷೇತ್ರಗಳ ಪುನರ್ ವಿಂಗಡನೆ, ಮೀಸಲಾತಿ ಮತ್ತಿತರ ಅಂಶಗಳಿಗೆ ಸಂಬಂಧಿಸಿದಂತೆ ಗೊಂದಲ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಉಚ್ಚ ನ್ಯಾಯಾಲಯ ಚುನಾವಣೆಗೆ ತಡೆಯಾಜ್ಞೆ ನೀಡಿತ್ತು.
ಉಚ್ಚ ನ್ಯಾಯಾಲಯದ ತಡೆಯಾಜ್ಞೆಯನ್ನು ತೆರವುಗೊಳಿಸಸುವಂತೆ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗ, ಸರ್ವೋಚ್ಛ ನ್ಯಾಯಾಲಯಕ್ಕೆ ಮೊರೆ ಹೋಗಿದ್ದವು.
ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಹಿನ್ನೆಲೆ ಮುಂದಿನ ಮೂರುನಾಲ್ಕು ದಿನಗಳಲ್ಲಿಯೇ ತಾ.ಪಂ. ಮತ್ತು ಜಿ.ಪಂ. ಚುನಾವಣೆಗಳ ಪ್ರಕ್ರಿಯೆಗೆ ಚಾಲನೆ ನೀಡುವುದಾಗಿ ಸರ್ಕಾರ ತಿಳಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು












Click it and Unblock the Notifications