ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿಗಮ-ಮಂಡಳಿ ವಿಚಾರ, ಧರಂ ಬಳಿ ಜೆಡಿಎಸ್‌ ನಿಯೋಗ

By Staff
|
Google Oneindia Kannada News

ನಿಗಮ-ಮಂಡಳಿ ವಿಚಾರ, ಧರಂ ಬಳಿ ಜೆಡಿಎಸ್‌ ನಿಯೋಗ
ಅಧಿಕಾರ ಹಂಚಿಕೆ ಒಪ್ಪಂದವನ್ನು ಕಾಂಗ್ರೆಸ್‌ ಪಾಲಿಸಲಿ : ಎಂ.ಪಿ.ಪ್ರಕಾಶ್‌

ಬೆಂಗಳೂರು : ನಿಗಮ-ಮಂಡಳಿ ಮುಖ್ಯಸ್ಥರ ನೇಮಕಾತಿ ಸಂಬಂಧ, ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್‌ ನೇತೃತ್ವದ ಜೆಡಿಎಸ್‌ ನಿಯೋಗ ಸದ್ಯದಲ್ಲೇ ಮುಖ್ಯಮಂತ್ರಿ ಧರ್ಮಸಿಂಗ್‌ ಅವರನ್ನು ಭೇಟಿಮಾಡಲಿದೆ.

ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್‌ ಸೋಮವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ನಿಗಮ-ಮಂಡಳಿಗಳ ಮುಖ್ಯಸ್ಥರ ನೇಮಕಾತಿಯಲ್ಲಿ ವಿಳಂಬವಾಗುತ್ತಿದೆ. ಇದರಿಂದ ಸಹಜವಾಗಿಯೇ ಪಕ್ಷದ ಕಾರ್ಯಕರ್ತರು ಮತ್ತು ಶಾಸಕರು ಅಸಮಾಧಾನಗೊಂಡಿದ್ದಾರೆ. ಒಪ್ಪಂದದ ಪ್ರಕಾರ, ರಾಜಕೀಯ ಅಧಿಕಾರ ಹಂಚಿಕೆ ಮತ್ತು ಪ್ರಮುಖ ಹುದ್ದೆಗಳಿಗೆ ಅಧಿಕಾರಿಗಳನ್ನು ನೇಮಿಸುವ ಕುರಿತು ಕಾಂಗ್ರೆಸ್‌ ಪಕ್ಷವು ಜೆಡಿಎಸ್‌ನೊಂದಿಗೆ ಸಮಾಲೋಚಿಸಬೇಕು.

ಈ ಸಂಬಂಧ ನನ್ನ ನೇತೃತ್ವದಲ್ಲಿ ಜೆಡಿಎಸ್‌ ನಾಯಕರು, ಮುಖ್ಯಮಂತ್ರಿ ಧರ್ಮಸಿಂಗ್‌ ಅವರನ್ನು ಭೇಟಿ ಮಾಡಲಿದ್ದೇವೆ. ಅಲ್ಲಿ ಈ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.

ಧರ್ಮಸಿಂಗ್‌ ಭೇಟಿಯ ಹಿನ್ನೆಲೆಯಲ್ಲಿ ಜೆಡಿಎಸ್‌ ಕಾರ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಮತ್ತು ಕೈಗಾರಿಕಾ ಸಚಿವ ಪಿ.ಜಿ.ಆರ್‌.ಸಿಂಧ್ಯಾ ಅವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ವಿವರಿಸಿದರು.

(ಪಿಟಿಐ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X