ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣೆ ಅಧಿಕಾರಿಗಳಿಗೆ ಆನ್‌ಲೈನ್‌ ತರಬೇತಿ

By Staff
|
Google Oneindia Kannada News

ಚುನಾವಣೆ ಅಧಿಕಾರಿಗಳಿಗೆ ಆನ್‌ಲೈನ್‌ ತರಬೇತಿ
ವೀಡಿಯೋ ಕಾನ್ಫರನ್ಸ್‌ ಸೌಲಭ್ಯ, ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಏಕಕಾಲಕ್ಕೆ ತರಬೇತಿ...

ಬೆಂಗಳೂರು : ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ, ಚುನಾವಣಾಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ತರಬೇತಿ ನೀಡಲು ರಾಜ್ಯ ಚುನಾವಣೆ ಆಯೋಗ ನಿರ್ಧರಿಸಿದೆ.

ರಾಜ್ಯಚುನಾವಣಾ ಆಯುಕ್ತ ಎಂ.ಆರ್‌.ಹೆಗಡೆ ಶನಿವಾರ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

ಎಲ್ಲ ಚುನಾವಣಾ ಅಧಿಕಾರಿಗಳನ್ನು ಬೆಂಗಳೂರಿಗೆ ಕರೆಸಿಕೊಂಡು ತರಬೇತಿ ನೀಡುವುದು ಕಷ್ಟವಾಗುತ್ತಿದೆ. ಆದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಮೈಸೂರಿನಲ್ಲಿರುವ ಅಬ್ದುಲ್‌ ನಜೀರ್‌ ಸಾಬ್‌ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ತರಬೇತಿ ಸಂಸ್ಥೆಯಲ್ಲಿ, ಉಪಗ್ರಹದ ನೆರವಿನಿಂದ ವಿಡಿಯೋ ಕಾನ್ಫರನ್ಸ್‌ ನಡೆಸಲಾಗುವುದು. ಇದರಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ, ಎಲ್ಲ ಚುನಾವಣಾಧಿಕಾರಿಗಳಿಗೂ ಏಕಕಾಲಕ್ಕೆ ತರಬೇತಿ ದೊರೆಯಲಿದೆ ಎಂದು ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X