ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋರಮಂಗಲ : 188ಅಕ್ರಮ ಕಟ್ಟಡಗಳ ನೆಲಸಮಕ್ಕೆ ಯತ್ನ

By Staff
|
Google Oneindia Kannada News

ಕೋರಮಂಗಲ : 188ಅಕ್ರಮ ಕಟ್ಟಡಗಳ ನೆಲಸಮಕ್ಕೆ ಯತ್ನ
ಅಕ್ರಮ ಕಟ್ಟಡಗಳು ನೆಲಸಮಕ್ಕೆ ಹೈಕೋರ್ಟ್‌ ಆಜ್ಞೆ, ಕೋವಮಂಗಲದಲ್ಲಿ ಧರಣಿ

ಬೆಂಗಳೂರು : ನಗರದ ಕೋರಮಂಗಲದಲ್ಲಿ ಯಾವುದೇ ಅಕ್ರಮ ಕಟ್ಟಡಗಳಿದ್ದರೆ ನೆಲಸಮಗೊಳಿಸುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ. ಹೀಗಾಗಿ ಬೆಂಗಳೂರು ಮಹಾನಗರ ಪಾಲಿಕೆ ತನ್ನ ‘ಅಕ್ರಮ-ನೆಲಸಮ’ ಕಾರ್ಯವನ್ನು ಮುಂದುವರೆಸಿದೆ.

ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ ಎನ್‌.ಕೆ.ಸೋಧಿ ಹಾಗೂ ನ್ಯಾಯಮೂರ್ತಿ ಎನ್‌.ಕುಮಾರ್‌ ಅವರನ್ನೊಳಗೊಂಡ ವಿಭಾಗೀಯ ಪೀಠ, ಈ ಕುರಿತು ಸೋಮವಾರ ಹಸಿರು ನಿಶಾನೆ ತೋರಿಸಿದೆ. ಅಲ್ಲದೆ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಕಟ್ಟಡಗಳ ಮಾಲೀಕರು ಸಲ್ಲಿಸಿದ ಅರ್ಜಿಯನ್ನೂ ಹೈಕೋರ್ಟ್‌ ತಳ್ಳಿಹಾಕಿದೆ.

ಈ ಹಿಂದೆ ಮಹಾನಗರ ಪಾಲಿಕೆ ಸಮೀಕ್ಷೆ ನಡೆಸಿ, ಕೋರಮಂಗಲ ಬಡಾವಣೆಯಲ್ಲಿ ಒಟ್ಟು 87ಕಟ್ಟಡಗಳು ಅಕ್ರಮವಾಗಿ ನಿರ್ಮಿತವಾಗಿವೆ ಎಂದು ವರದಿ ನೀಡಿತ್ತು. ಆದರೆ ಹೈಕೋರ್ಟ್‌ ಆದೇಶದ ಬಳಿಕ ನಡೆಸಿದ ಸಮೀಕ್ಷೆಯಲ್ಲಿ 188ಕಟ್ಟಡಗಳು ಅಕ್ರಮವಾಗಿರುವುದು ಬೆಳಕಿಗೆ ಬಂದಿತ್ತು.

ಕೆಲವೊಂದು ಸಣ್ಣಪುಟ್ಟ ಕಟ್ಟಡಗಳು ಸಕ್ರಮಗೊಳಿಸಲು ಯೋಗ್ಯವಾಗಿದಲ್ಲಿ ಅವುಗಳನ್ನು ಸಕ್ರಮಗೊಳಿಸಬಹುದಾಗಿದೆ. ಆದರೆ ಸಂಪೂರ್ಣ ನಿಯಮ ಉಲ್ಲಂಘನೆ ಮಾಡಿ ನಿರ್ಮಿಸಲಾದ ಕಟ್ಟಡಗಳನ್ನು ಯಾವುದೇ ಮುಲಾಜಿಲ್ಲದೆ ತೆರವು ಗೊಳಿಸಬೇಕೆಂದು ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

ಪ್ರತಿಭಟನೆ : ಕಟ್ಟಡಗಳನ್ನು ನೆಲಸಮ ಮಾಡುವುದನ್ನು ನಿಲ್ಲಿಸಿ ಎಂದು ಒತ್ತಾಯಿಸಿ ಕೋರಮಂಗಲದಲ್ಲಿ ಸಾರ್ವಜನಿಕರು ಸೋಮವಾರ ಪ್ರತಿಭಟನೆ ಮತ್ತು ಬಂದ್‌ ನಡೆಸಿದರು.

ಮಂಗಳವಾರವೂ ಪ್ರತಿಭಟನೆ ಮತ್ತು ಬಂದ್‌ ಮುಂದುವರೆಯಲಿದೆ ಎಂದು ಮೂಲಗಳು ತಿಳಿಸಿವೆ.

(ಇನ್ಫೋ ವಾರ್ತೆ)

ಮುಖಪುಟ / ಬೆಂಗಳೂರು ಡೈರಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X