ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಪೂರ್ಣ ಸಚಿವ ಸಂಪುಟ 19ರಂದು ಅಸ್ತಿತ್ವಕ್ಕೆ

By Staff
|
Google Oneindia Kannada News

ಪರಿಪೂರ್ಣ ಸಚಿವ ಸಂಪುಟ 19ರಂದು ಅಸ್ತಿತ್ವಕ್ಕೆ
ಬಿಜೆಪಿ-ಜೆಡಿಎಸ್‌ 18 : 16, ಮಾಸಾಂತ್ಯದಲ್ಲಿ ನಿಗಮ-ಮಂಡಳಿ ಅಧ್ಯಕ್ಷರ ನೇಮಕ

ವಿಲ್ಲುಪುರಂ(ತಮಿಳುನಾಡು) : ಫೆಬ್ರವರಿ 19ರಂದು ಪೂರ್ಣ ಪ್ರಮಾಣದ ಸಚಿವ ಸಂಪುಟ ಅಸ್ತಿತ್ವಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಶನಿವಾರ ಸುನಾಮಿ ಸಂತ್ರಸ್ತರಿಗಾಗಿ ನಿರ್ಮಿಸಿರುವ ವಸತಿ ಗೃಹಗಳನ್ನು ಉದ್ಘಾಟಿಸಿದ ನಂತರ, ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ವಿಷಯ ತಿಳಿಸಿದ್ದಾರೆ.

ಒಂದೇ ಹಂತದಲ್ಲಿ ಬಿಜೆಪಿಯ 18 ಶಾಸಕರು ಹಾಗೂ ಜಾತ್ಯತೀತ ಜನತಾದಳದ 16 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವರು. ಅಲ್ಲದೆ ಮಾಸಾಂತ್ಯದಲ್ಲಿ ನಿಗಮ-ಮಂಡಳಿಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

(ಏಜೆನ್ಸೀಸ್‌)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X