ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮದುವೆ ನೋಂದಣಿ ಇನ್ಮುಂದೆ ಕಡ್ಡಾಯ -ಸು.ಕೋರ್ಟ್‌

By Staff
|
Google Oneindia Kannada News

ಮದುವೆ ನೋಂದಣಿ ಇನ್ಮುಂದೆ ಕಡ್ಡಾಯ -ಸು.ಕೋರ್ಟ್‌
ನೋಂದಣಿ ಮಾಡಿಸದಿದ್ದರೆ ಅಥವಾ ತಪ್ಪು ಮಾಹಿತಿ ನೀಡಿದರೆ ಸೂಕ್ತ ಕ್ರಮ

ನವದೆಹಲಿ : ಇನ್ನು ಮುಂದೆ ಮದುವೆ ನೋಂದಣಿ ಕಡ್ಡಾಯವಾಗಲಿದೆ. ಈ ನಿಟ್ಟಿನಲ್ಲಿ ವಿಶೇಷ ನಿಯಮ ರೂಪಿಸುವಂತೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ಈಗಿರುವ ನಿಯಮಾವಳಿಗಳಿಗೆ ಅಗತ್ಯ ತಿದ್ದುಪಡಿ ತಂದು, ಮದುವೆ ನೋಂದಣಿಯನ್ನು ಮೂರು ತಿಂಗಳೊಳಗೆ ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಎಂದು ನ್ಯಾಯಮೂರ್ತಿಗಳಾದ ಅರಿಜಿತ್‌ ಮತ್ತು ಎಸ್‌.ಎಚ್‌. ಕಪಡಿಯಾ ಸೂಚಿಸಿದ್ದಾರೆ.

ನೋಂದಣಿ ಪ್ರಕ್ರಿಯೆಗೆ ಸಂಬಂಧಿಸಿದಂತೆ, ಸಾರ್ವಜನಿಕ ತಕರಾರುಗಳಿಗೆ ಒಂದು ತಿಂಗಳು ಕಾಲಾವಕಾಶ ನೀಡುವಂತೆ ಸೂಚಿಸಿದೆ. ಅಲ್ಲದೇ ಈ ಬಗ್ಗೆ ವ್ಯಾಪಕ ಪ್ರಚಾರ ನೀಡುವಂತೆ ನ್ಯಾಯಾಲಯ ಸಲಹೆ ನೀಡಿದೆ.

(ಏಜನ್ಸೀಸ್‌)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X