ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೌಡರ ಹೊಸ ವರಸೆ : ಜೆಡಿಎಸ್‌ ಅಧ್ಯಕ್ಷ ಸ್ಥಾನಕ್ಕೆ ಪ್ರಕಾಶ್‌?

By Staff
|
Google Oneindia Kannada News

ಗೌಡರ ಹೊಸ ವರಸೆ : ಜೆಡಿಎಸ್‌ ಅಧ್ಯಕ್ಷ ಸ್ಥಾನಕ್ಕೆ ಪ್ರಕಾಶ್‌?
ನಾನೊಬ್ಬ ವ್ಯಕ್ತಿ. ಹೀಗಾಗಿ ಅನಿವಾರ್ಯಗಳನ್ನು ಒಪ್ಪಿಕೊಳ್ಳುತ್ತೇನೆ -ಎಂ.ಪಿ.ಪ್ರಕಾಶ್‌

ಬೆಂಗಳೂರು : ಶೀಘ್ರದಲ್ಲೇ ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್‌, ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆಯನ್ನು ಅಲಂಕರಿಸಲಿದ್ದಾರೆಂಬ ಮಾತು ರಾಜಕೀಯ ಪಡಸಾಲೆಯಿಂದ ಕೇಳಿಬಂದಿದೆ.

ಪಕ್ಷ ಕಟ್ಟುವ ಜವಾಬ್ದಾರಿಯನ್ನು ಎಂ.ಪಿ.ಪ್ರಕಾಶ್‌ ಅವರಿಗೇ ವಹಿಸಲು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ನಿರ್ಧರಿಸಿದ್ದಾರೆ. ಸದ್ಯದಲ್ಲಿಯೇ ಈ ಬಗೆಗಿನ ಪ್ರಕಟಣೆ ಹೊರಬೀಳುವ ಸಾಧ್ಯತೆಗಳಿವೆ.

ಪಕ್ಷದ ಸಿದ್ಧಾಂತಗಳಿಗೆ ವಿರುದ್ಧವಾಗಿ ವರ್ತಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‌ನ 40ಶಾಸಕರನ್ನು ಪಕ್ಷದಿಂದ ಅಮಾನತುಗೊಳಿಸಿರುವ ದೇವೇಗೌಡರು, ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಲು ಆಸಕ್ತಿ ವಹಿಸಿದ್ದಾರೆ.

ಅಸಹಾಯಕತೆ : ಪಕ್ಷವಹಿಸುವ ಯಾವುದೇ ಜವಾಬ್ದಾರಿಯನ್ನು ನಿರ್ವಹಿಸುವುದಾಗಿ ಪ್ರತಿಕ್ರಿಯಿಸಿರುವ ಎಂ.ಪಿ.ಪ್ರಕಾಶ್‌, ತತ್ವ ಆದರ್ಶ ಎಂದೆಲ್ಲಾ ಮಾತನಾಡಿದರೂ, ನಾನೊಬ್ಬ ಮನುಷ್ಯ. ನಮ್ಮನ್ನು ಎತ್ತಿ ಬೆಳೆಸಿದವರ ಆಶಯಗಳನ್ನು ಪೂರೈಸುವುದು ಕರ್ತವ್ಯ ಎಂದು ಮಾರ್ಮಿಕವಾಗಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X