ಬೆಳಗಾವಿ, ಮಂಡ್ಯದಲ್ಲಿ ಹೊಸ ವೈದ್ಯಕೀಯ ಕಾಲೇಜುಗಳು

ಬೆಳಗಾವಿ, ಮಂಡ್ಯದಲ್ಲಿ ಹೊಸ ವೈದ್ಯಕೀಯ ಕಾಲೇಜುಗಳು
ವೈದ್ಯಕೀಯ ಕಾಲೇಜುಗಳಲ್ಲಿನ ಹುದ್ದೆ ಭರ್ತಿಗೆ ಕ್ರಮ -ಡಾ.ವಿ.ಎಸ್‌.ಆಚಾರ್ಯ

ಬೆಂಗಳೂರು : ಬೆಳಗಾವಿ ಮತ್ತು ಮಂಡ್ಯದಲ್ಲಿ ಹೊಸ ವೈದ್ಯಕೀಯ ಕಾಲೇಜುಗಳನ್ನು ಮುಂಬರುವ ಶೈಕ್ಷಣಿಕ ವರ್ಷ(2006-07)ದಲ್ಲಿ ಆರಂಭಿಸುವುದಾಗಿ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ವಿ.ಎಸ್‌. ಆಚಾರ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಹೊಸ ಕಾಲೇಜುಗಳ ತೆರೆಯಲು ಯಾವುದೇ ಹಣಕಾಸಿನ ತೊಂದರೆಯಿಲ್ಲ. ಸಿಇಟಿ ಸೀಟು ಹಂಚಿಕೆ ಪಟ್ಟಿ ಹೊರಬರುವ ಸಂದರ್ಭದಲ್ಲಿ ರಾಜ್ಯದಲ್ಲಿ ಎಷ್ಟು ಹೊಸ ಕಾಲೇಜುಗಳನ್ನು ಆರಂಭಿಸಬೇಕು ಎಂಬ ಬಗ್ಗೆ ತೀರ್ಮಾನಿಸಲಾಗುವುದು ಎಂದರು.

ರಾಜ್ಯದಲ್ಲಿ 28ವೈದ್ಯಕೀಯ ಕಾಲೇಜುಗಳಿದ್ದು, 300 ಪ್ರಾಧ್ಯಾಪಕರ ಅವಶ್ಯಕತೆ ಇದೆ. ಆದರೆ 150 ಪ್ರಾಧ್ಯಾಪಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಗಮನಹರಿಸಲಿದೆ ಎಂದು ಸಚಿವರು ಹೇಳಿದರು.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+