ಕರ್ನಾಟಕದಿಂದ ರಾಜ್ಯಸಭೆಗೆ ಬಿಜೆಪಿ ನಾಯಕಿ ಸುಷ್ಮಾ ಸ್ಪರ್ಧೆ?

ಕರ್ನಾಟಕದಿಂದ ರಾಜ್ಯಸಭೆಗೆ ಬಿಜೆಪಿ ನಾಯಕಿ ಸುಷ್ಮಾ ಸ್ಪರ್ಧೆ?
ಕರ್ನಾಟಕದ ಒಟ್ಟು ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ, ಘಟಾನುಘಟಿಗಳ ಕಸರತ್ತು

ಬೆಂಗಳೂರು : ಭಾರತೀಯ ಜನತಾ ಪಕ್ಷದ ಜನಪ್ರಿಯ ನಾಯಕಿ ಹಾಗೂ ಬಳ್ಳಾರಿಯ ಪ್ರೀತಿಯ ಮಗಳು(?) ಸುಷ್ಮಾ ಸ್ವರಾಜ್‌, ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸುವ ನಿಚ್ಚಳ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

1999ರ ಲೋಕಸಭಾ ಚುನಾವಣೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡರೂ, ಬಳ್ಳಾರಿ ಜನತೆ ಇವರನ್ನು ಮರೆತಿಲ್ಲ. ಇವರೂ ಆಗಾಗ ಬಳ್ಳಾರಿಗೆ ಭೇಟಿ ನೀಡಿ ತಮ್ಮ ಪ್ರೀತಿ ಮೆರೆದಿದ್ದಾರೆ. ಮಾರ್ಚ್‌ 28ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಸುಷ್ಮಾ ಸ್ವರಾಜ್‌ ಅವರನ್ನು ಕಣಕ್ಕಿಳಿಸಲು ಬಿಜೆಪಿ ಸರ್ವ ಸನ್ನದ್ಧವಾಗಿದೆ.

ಈ ವಿಷಯವನ್ನು ರಾಜ್ಯ ಬಿಜೆಪಿ ಮೂಲಗಳು ಅಲ್ಲಗಳೆದಿಲ್ಲ. ಈ ಕುರಿತು ರಾಜ್ಯ ಬಿಜೆಪಿ ನಾಯಕರುಗಳೊಂದಿಗೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಂಪರ್ಕದಲ್ಲಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಕರ್ನಾಟಕದ ಒಟ್ಟು ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

(ಏಜೆನ್ಸೀಸ್‌)

ಮುಖಪುಟ / ವಾರ್ತೆಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+