ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಸ ನಿರ್ಧಾರ : ಸಿಬಿಎಸ್‌ಸಿ ಶಾಲೆಗಳಲ್ಲಿ ಕನ್ನಡ ಮಾಧ್ಯಮ

By Staff
|
Google Oneindia Kannada News

ಹೊಸ ನಿರ್ಧಾರ : ಸಿಬಿಎಸ್‌ಸಿ ಶಾಲೆಗಳಲ್ಲಿ ಕನ್ನಡ ಮಾಧ್ಯಮ
ಮುಂಬರುವ ಶೈಕ್ಷಣಿಕ ವರ್ಷದಿಂದಲೇ ಜಾರಿ, ನಿಯಮ ಉಲ್ಲಂಘಿಸಿದರೆ ಉಗ್ರ ಕ್ರಮ

ಬೆಂಗಳೂರು : ಹೊಸದಾಗಿ ಆರಂಭಿಸಲಾಗುವ ಐಸಿಎಸ್‌ಸಿ-ಸಿಬಿಎಸ್‌ಸಿ ಶಾಲೆಗಳಲ್ಲಿ, 1ರಿಂದ 5ನೇ ತರಗತಿಯವರೆಗೆ ಕನ್ನಡ ಮಾಧ್ಯಮ ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಪ್ರಾಥಮಿಕ-ಪ್ರೌಢ ಶಿಕ್ಷಣ ಹಾಗೂ ಕಾನೂನು ಮತ್ತು ಸಂಸದೀಯ ಸಚಿವ ಬಸವರಾಜ ಹೊರಟ್ಟಿ , ಈ ವಿಷಯ ಖಚಿತಪಡಿಸಿದ್ದಾರೆ. ರಾಜ್ಯದ ನಿಯಮ ಎಲ್ಲರಿಗೂ ಅನ್ವಯವಾಗಬೇಕು. ಅದರಂತೆ ಐಸಿಎಸ್‌ಸಿ-ಸಿಬಿಎಸ್‌ಸಿ ಶಾಲೆಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿಸಬೇಕು. ಆದಷ್ಟು ಬೇಗ ಈ ಕುರಿತು ತೀರ್ಮಾನ ಪ್ರಕಟಿಸಿಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಮುಂದಿನ ಶೈಕ್ಷಣಿಕ ವರ್ಷದಿಂದಲೇ ಈ ನಿಯಮ ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಹೊಸದಾಗಿ ನಿರಾಕ್ಷೇಪಣಾ ಪತ್ರ(ಎನ್‌ಓಸಿ) ಕೇಳುವ ಐಸಿಎಸ್‌ಸಿ-ಸಿಬಿಎಸ್‌ಸಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಅಥವಾ ಮಾತೃಭಾಷಾ ಮಾಧ್ಯಮದಲ್ಲಿ ಬೋ-ಸಲಾಗುತ್ತಿದ್ದೆಯೇ ಹಾಗೂ ಕನ್ನಡ ಭಾಷೆಯನ್ನು ಕಲಿಸಲಾಗುತ್ತಿದೆಯೇ ಎಂದು ಗಮನಿಸಲಾಗುವುದು. ಈ ನಿಯಮ ಉಲ್ಲಂಘಿಸಿದರೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X